ಬ್ರೇಕಿಂಗ್ ನ್ಯೂಸ್
22-11-24 03:53 pm HK News Desk ಕರ್ನಾಟಕ
ಮಡಿಕೇರಿ, ನ.22: ಕೊಡಗು ಜಿಲ್ಲೆಯಲ್ಲಿ ತಮ್ಮ ಸಮುದಾಯದ ಜನಸಂಖ್ಯೆ ಹೆಚ್ಚಿಸಲು ಕೊಡವ ಸಮಾಜ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದೆ. ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವ ಪೋಷಕರಿಗೆ 25,000 ರೂ.ನಿಂದ 1 ಲಕ್ಷ ರೂ. ವರೆಗೆ ಬಹುಮಾನ ನೀಡುವ ಆಫರ್ ಒಂದನ್ನು ಪ್ರಕಟಿಸಿದೆ.
ಕೊಡಗು ಜಿಲ್ಲೆ ಅತಿ ವಿಶಿಷ್ಟ ಸಂಸ್ಕೃತಿ, ಪರಂಪರೆಗೆ ಹೆಸರಾದ ಜಿಲ್ಲೆ. ಕೊಡವ ಸಂಸ್ಕೃತಿ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ವರ್ಷಗಳಿಂದ ಕೊಡವರ ಜನಸಂಖ್ಯೆ ಇಳಿಕೆಯಾಗುತ್ತಿದ್ದು ಇದರಿಂದ ಸಾಂಸ್ಕೃತಿಕವಾಗಿ ಅವನತಿಯತ್ತ ಸಾಗುತ್ತಿದ್ದಾರೆ ಅನ್ನುವ ಆತಂಕ ಎದುರಾಗಿದೆ. ಕೆಲವರು ತಮ್ಮ ಉದ್ಯೋಗಕ್ಕಾಗಿ ದೂರದ ಊರಿಗೆ ತೆರಳಿ ಅಲ್ಲಿಯೇ ಜೀವನ ಕಟ್ಟಿಕೊಳ್ಳುತ್ತಿದ್ದಾರೆ. ಜೊತೆಗೆ ಒಂದೇ ಮಗು ಸಾಕು ಅಂತ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ವಾರ್ಷಿಕ ಹಬ್ಬ ಹರಿದಿನಗಳಿಗೆ ಬರುವ ಕೊಡವರ ಸಂಖ್ಯೆಯೂ ಕಡಿಮೆ ಆಗುತ್ತಿದೆ.
ಪರಿಸ್ಥಿತಿ ಹೀಗಾದರೆ ಮುಂದೊಂದು ದಿನ ಕೊಡವರು ಬೆರಳೆಣಿಕೆ ಸಂಖ್ಯೆಗೆ ಇಳಿದರೂ ಅಚ್ಚರಿ ಇಲ್ಲ. ಹಾಗಾಗಿ ಎಲ್ಲೇ ಇರಿ, ತಮ್ಮ ಸಮಾಜದವರು ಹೆಚ್ಚು ಮಕ್ಕಳನ್ನು ಪಡೆಯಿರಿ ಎಂದು ಕೊಡವ ಸಮಾಜ ಆಫರ್ ನೀಡಿದೆ. ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಕೊಡವ ಸಮಾಜ ಸಂಘದ ವತಿಯಿಂದ ಈ ವಿಶಿಷ್ಟ ಆಫರ್ ನೀಡಲಾಗಿದೆ. ಮೂರು ಮಕ್ಕಳಿಗೆ ಜನ್ಮ ನೀಡುವ ಕೊಡವ ಪೋಷಕರಿಗೆ 50 ಸಾವಿರ ರೂ., 4 ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಈ ಹಣವನ್ನ ಆ ಮಗುವಿನ ಹೆಸರಲ್ಲಿ ಬ್ಯಾಂಕ್ನಲ್ಲಿ ಠೇವಣಿ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಣೆಯಲ್ಲಿ ಕೊಡವ ಸಮಾಜ ತಿಳಿಸಿದೆ.
ಮಕ್ಕಿಳಿಗಾಗಿ ಹೊಸ ಆಫರ್ ಘೋಷಣೆ ಮಾಡಿರುವ ಕೊಡವ ಸಮಾಜ, ಈಗಾಗಲೇ 3 ಮತ್ತು 4 ಮಕ್ಕಳನ್ನು ಮಾಡಿಕೊಂಡಿರುವ ತಲಾ ಒಂದೊಂದು ಕುಟುಂಬವನ್ನು ಗುರುತಿಸಿ ಸನ್ಮಾನ ಮಾಡಿದೆ. ಹಲವು ಕೊಡವ ಕುಟುಂಬಗಳಿಗೆ ವೈಯಕ್ತಿಕವಾಗಿಯೂ ಹಣಕಾಸು ನೆರವು ನೀಡಿದೆ. ತಮ್ಮ ಜನಾಂಗ ಮತ್ತು ಸಂಸ್ಕೃತಿ ಉಳಿಸಲು ಧನಾತ್ಮಕ ಕ್ರಮಕ್ಕೆ ಶೆಟ್ಟಿಗೇರಿ ಕೊಡವ ಸಮಾಜ ಮುಂದಾಗಿದ್ದು ಸಮಾಜದಲ್ಲಿ ಹೊಸ ಬೆಳವಣಿಗೆಯಾಗಿದೆ.
ಈ ಕುರಿತು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮಾತಾನಾಡಿ, ಕೊಡವ ಸಮಾಜ ಅತ್ಯಂತ ಸಣ್ಣ ಸಮುದಾಯ. ಜನಸಂಖ್ಯೆ ಬಹಳ ಕಡಿಮೆ ಇದೆ. ಇವರ ಸಂಸ್ಕೃತಿ, ಪದ್ದತಿ ಇಡೀ ದೇಶದಲ್ಲೇ ವಿಶಿಷ್ಟವಾಗಿದೆ. ಹಾಗಾಗಿ ಕೊಡವ ಜನಾಂಗವನ್ನ ರಕ್ಷಣೆ ಮಾಡಬೇಕೆಂಬ ಬಯಕೆಯೂ ಇದೆ ಎಂದು ತಿಳಿಸಿದ್ದಾರೆ.
Cash incentive, a new scheme to encourage population growth within the Kodava community in the village.
Under this initiative, Kodava couples will receive Rs 50k if they have a third child and Rs 1 lakh for the fourth child. The money will be deposited in a bank account and can be withdrawn when the child attains the age of 18 years. The decision was made in response to the overall decline in the population of the Kodava community.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am