ಬ್ರೇಕಿಂಗ್ ನ್ಯೂಸ್
23-11-24 02:15 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಆಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತದಾರರು ಸಹಮತ ವ್ಯಕ್ತಪಡಿಸಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಭಾರೀ ಪೈಪೋಟಿಗೆ ಸಾಕ್ಷಿಯಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸೈನಿಕ ಸಿಪಿ ಯೋಗೀಶ್ವರ್ ನಿರಾಯಾಸ ಗೆಲುವು ಕಂಡಿದ್ದಾರೆ. ಕ್ಷೇತ್ರದಲ್ಲಿ ಮತ ಎಣಿಕೆ ಮುಗಿದಿದ್ದು ಯೋಗೀಶ್ವರ್ 112388 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ 87031 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸೋಲಾಗುತ್ತೋ ಎನ್ನುವ ಆತಂಕದಲ್ಲಿದ್ದ ಯೋಗೀಶ್ವರ್ 25,357 ಮತಗಳಿಂದ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತನ್ನ ಕ್ಷೇತ್ರದಲ್ಲಿ ಪುತ್ರನನ್ನೇ ಕಣಕ್ಕಿಳಿಸಿದ್ದ ಕುಮಾರಸ್ವಾಮಿಗೆ ಈ ಫಲಿತಾಂಶ ತೀವ್ರ ಮುಖಭಂಗ ಉಂಟು ಮಾಡಿದೆ.
ಕಾಂಗ್ರೆಸಿನ ಭದ್ರಕೋಟೆ ಎನಿಸಿಕೊಂಡಿದ್ದ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9645 ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸಿನ ಅನ್ನಪೂರ್ಣ ಪರವಾಗಿ 93606 ಮತಗಳು ಬಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರವಾಗಿ 83961 ಮತ ಗಳಿಸಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಶಾಸಕರಾಗಿದ್ದ ಇ.ತುಕಾರಾಂ ಸಂಸದರಾಗಿದ್ದರಿಂದ ಉಪ ಚುನಾವಣೆ ನಡೆದಿದ್ದು ಅವರ ಪತ್ನಿಯನ್ನೇ ಕಣಕ್ಕಿಳಿಸಲಾಗಿತ್ತು
.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರದಲ್ಲಿ ಅವರ ಪುತ್ರ ಭರತ್ ಬೊಮ್ಮಾಯಿ ಉಪ ಚುನಾವಣೆಗೆ ಸ್ಪರ್ಧಿಸಿದ್ದರು. ಬೊಮ್ಮಾಯಿ ನಾಲ್ಕು ಬಾರಿ ಗೆದ್ದಿದ್ದರಿಂದ ಪುತ್ರನಿಗೆ ಸುಲಭ ಗೆಲುವೆಂದೇ ತಿಳಿಯಲಾಗಿತ್ತು. ಎದುರಾಳಿ ಮುಸ್ಲಿಂ ಅಭ್ಯರ್ಥಿಯಾಗಿದ್ದರಿಂದ ಬೊಮ್ಮಾಯಿ ನಿರಾಯಾಸ ಗೆಲುವು ಎನ್ನಲಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಅಚ್ಚರಿ ಎನ್ನುವಂತೆ ಗೆದ್ದಿದ್ದಾರೆ. ಭರತ್ ಬೊಮ್ಮಾಯಿ ಪರವಾಗಿ 86960 ಮತಗಳು, ಕಾಂಗ್ರೆಸಿನ ಯಾಸಿರ್ ಪಠಾಣ್ ಪರವಾಗಿ 100587 ಮತಗಳು ಬಿದ್ದಿವೆ. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ 13627 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮೇಲ್ನೋಟಕ್ಕೆ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಅತಿ ವಿಶ್ವಾಸವೇ ಇಲ್ಲಿ ಸೋಲಾಗಿಸಿದೆ.
The ruling Congress has won the by-elections to three assembly constituencies in the state, sending a clear message that voters have expressed their support for the Siddaramaiah government.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am