MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗಿ ಅನುದಾನ ಬರುತ್ತಿಲ್ಲ, ಎರಡು ಉಚಿತ ಯೋಜನೆ ಕಡಿತ ಮಾಡಬೇಕು ; ಕಾಂಗ್ರೆಸ್ ಶಾಸಕರ ಬೇಸರ 

26-11-24 06:11 pm       HK News Desk   ಕರ್ನಾಟಕ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್‌ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. 

ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್‌ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. 

ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ. 

ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್‌ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.

Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.