ಬ್ರೇಕಿಂಗ್ ನ್ಯೂಸ್
01-12-24 09:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ಬಿಜೆಪಿ ಕಾರ್ಯಕರ್ತರಿಗೆ ಅವಮಾನ ಆಗುವಂತೆ ಯಾರೂ ನಡೆದುಕೊಳ್ಳದಿರಿ. ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಒಂದು ಕ್ಷಣವೂ ತಡಮಾಡದೆ ಬಿಡುಗಡೆ ಮಾಡಿ ಎಂದು ರೆಬಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಅವರು, ಪಕ್ಷಕ್ಕೆ ಅಗೌರವ ಆಗುವಂತೆ ಯಾರು ಕೂಡ ಮಾಧ್ಯಮಗಳಲ್ಲಿ ಮಾತನಾಡಬಾರದು. ನಮ್ಮ ನಡವಳಿಕೆ, ಹೇಳಿಕೆಗಳು ಸಂಘಟನೆಗೆ ಪೂರಕವಾಗಿ ಇರಬೇಕೇ ಹೊರತು ಸಂಘಟನೆಗೆ ತೊಂದರೆ ಕೊಡುವ ಕೆಲಸವನ್ನು ನಾನೂ ಮಾಡಬಾರದು. ಮತ್ತೊಬ್ಬನೂ ಮಾಡಬಾರದು ಎಂದು ಹೇಳಿದರು.
ವಿಜಯೇಂದ್ರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಬದಲಾವಣೆ ಪ್ರಯತ್ನ ಮಾಡಲಿ; ಬೇಕಾದರೆ ಇನ್ನೂ ಹೆಚ್ಚು ಜನರನ್ನು ಸೇರಿಸಿಕೊಳ್ಳಲಿ. ಅದರ ಬಗ್ಗೆ ಅಭ್ಯಂತರವಿಲ್ಲ. ರಾಜ್ಯದಲ್ಲಿ ಸಂಘಟನೆ ಯಾವ ದಿಕ್ಕಿನಲ್ಲಿ ಹೋಗಬೇಕೆಂಬ ಬಗ್ಗೆ ಪಕ್ಷದ ವರಿಷ್ಠರಿಗೆ ಸ್ಪಷ್ಟತೆ ಇದೆ. ಅವರ ಅಕ್ಕ ಪಕ್ಕ ಇರುವವರಿಗೆ ವಿಜಯೇಂದ್ರನ ಬಗ್ಗೆ ಬೇಸರ ಇಲ್ಲ ಎಂದು ಹೇಳಿದರು.
ಚಾಡಿ ಹೇಳುವ ಅವಶ್ಯಕತೆ ನನಗಿಲ್ಲ
ಚಾಡಿ ಹೇಳುವುದಾಗಲೀ, ಯತ್ನಾಳರನ್ನು ಪಕ್ಷದಿಂದ ಹೊರಕ್ಕೆ ಕಳಿಸಬೇಕೆಂಬ ಒತ್ತಾಯ ಮಾಡಿಲ್ಲ; ಅದರ ಅವಶ್ಯಕತೆ ನನಗಿಲ್ಲ ಎಂದ ಬಿ.ವೈ.ವಿಜಯೇಂದ್ರ, ಕಳೆದ 3-4 ತಿಂಗಳುಗಳಲ್ಲಿ ನಾವು ಆಡಳಿತ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳಲ್ಲಿ ಮುಖ್ಯಮಂತ್ರಿಗಳನ್ನು ಕಟ್ಟಿ ಹಾಕುವ ಕೆಲಸ ಮಾಡಿದ್ದೇವೆ. ರಾಜ್ಯದ ಜನರು ಭ್ರಷ್ಟ ಕಾಂಗ್ರೆಸ್ ಸರಕಾರ ಎನ್ನುತ್ತಿದ್ದಾರೆ. ಇದರ ನಡುವೆ, ನಮ್ಮ ಕೆಲವು ಮುಖಂಡರು ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ರಾಜ್ಯ ಕಂಡ ಧೀಮಂತ ನಾಯಕ, ರೈತ ಮುಂದಾಳು ಯಡಿಯೂರಪ್ಪ ಬಗ್ಗೆ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಇನ್ನೂ ಕೆಲವರು ಯತ್ನಾಳರ ಹೆಗಲ ಮೇಲೆ ಗನ್ ಇಟ್ಟು ಗುಂಡು ಹಾರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ; ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಕಾರ್ಯಕರ್ತರು ಬಹಳಷ್ಟು ನೊಂದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಆಡಳಿತ ಪಕ್ಷವನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು 3 ಉಪ ಚುನಾವಣೆಗಳಲ್ಲಿ ಗೆದ್ದಿದೆ. ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳು ಮಾತನಾಡಿದ ಕೆಲವು ವಿಷಯಗಳ ಬಗ್ಗೆ ರಾಜ್ಯ ಸರಕಾರ ಎಫ್‍ಐಆರ್ ದಾಖಲು ಮಾಡಿಸಿದೆ. ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಆ ಹೋರಾಟದಲ್ಲಿ, ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದೆ. ಮಠ ಮಾನ್ಯಗಳು, ರೈತರ ಜಮೀನನ್ನು ಕಸಿದುಕೊಳ್ಳುವ, ಓಲೈಕೆ ರಾಜಕಾರಣದ ಕುರಿತು ಬೇಸತ್ತು ಸ್ವಾಮೀಜಿಗಳು ಮಾತನಾಡಿದ್ದಾರೆ ಎಂದು ವಿವರಿಸಿದರು. ಅದನ್ನು ಗಂಭೀರ ಪರಿಗಣಿಸಿ ಸ್ವಾಮೀಜಿ ವಿರುದ್ಧ ಎಫ್‍ಐಆರ್ ದಾಖಲು ಮಾಡಿದ್ದು ಖಂಡಿತ ಸರಿಯಲ್ಲ; ಸ್ವಾಮೀಜಿಗಳ ಹೇಳಿಕೆಯ ಹಿನ್ನೆಲೆಯನ್ನೂ ಅರ್ಥೈಸಿಕೊಳ್ಳಬೇಕು. ರಾಜ್ಯ ಸರಕಾರವು ವಿಪಕ್ಷದವರಷ್ಟೇ ಅಲ್ಲದೆ, ಯಾರ್ಯಾರು ಈ ಸರಕಾರದ ವಿರುದ್ಧ ಮಾತನಾಡುತ್ತಾರೋ ಅವರ ವಿರುದ್ಧ, ಮಠಮಾನ್ಯಗಳ ವಿರುದ್ಧ ಎಫ್‍ಐಆರ್ ದಾಖಲಿಸಿ ತೊಂದರೆ ಕೊಡುತ್ತಿದೆ. ಈ ಸರಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ತಿಳಿಸಿದರು.
ಹಾದಿಯಲ್ಲಿ ಬೀದಿಯಲ್ಲಿ ಮಾತನಾಡಿ ಪಕ್ಷ ಸಂಘಟನೆಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ಬಿಗಿಯಾದ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲಿದೆ. ನನ್ನ ನಾಯಕತ್ವ ಬದಲಾವಣೆಗೆ ಮನವಿ ಮಾಡಬಾರದೆಂದು ನಾನು ಹೇಳುವುದಿಲ್ಲ; ಆ ಮನವಿಯನ್ನು ಎಲ್ಲಿ, ಯಾರ ಮುಂದೆ ಮಾಡಬೇಕು? ಅಷ್ಟಾದರೂ ಸ್ಪಷ್ಟತೆ ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಗುರಿ ನನ್ನ ಮುಂದಿದೆ. ಯಡಿಯೂರಪ್ಪ, ವಿಜಯೇಂದ್ರ ಹೊಂದಾಣಿಕೆ ರಾಜಕೀಯ ಮಾಡಿಕೊಂಡರೆಂದು ಹೇಳಿ ಸಂಘಟನೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಅವರನ್ನು ಕಾರ್ಯಕರ್ತರು ಮತ್ತು ಭಗವಂತ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದು ನುಡಿದರು.
Amid the growing internal bickering in the Bharatiya Janata Party’s (BJP) State unit, a group of leaders owing allegiance to party’s State president B.Y. Vijayendra have announced that they will shortly be meeting national leaders to demand the expulsion of rebel leader Basanagouda Patil Yatnal and his followers.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm