ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.
ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್‌ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್, ಕಾನ್‌ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm