ಬ್ರೇಕಿಂಗ್ ನ್ಯೂಸ್
            
                        06-12-24 11:16 am HK News Desk ಕರ್ನಾಟಕ
            ಕಲಬುರಗಿ, ಡಿ 06: ಆನ್‌ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಸೋಮನಾಥ ಚಿದ್ರಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆನ್‌ಲೈನ್ ಜೂಜಿನ ಮೋಹಕ್ಕೆ ಬಿದ್ದಿದ್ದ ಸೋಮನಾಥ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಒಂದಷ್ಟು ಹಣವನ್ನು ಶೇ 4ರಿಂದ ಶೇ 10ರ ಬಡ್ಡಿ ದರದಲ್ಲಿ ತಂದಿದ್ದ. ನಂತರ ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ಹಾಸ್ಟೆಲ್ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ ಸಾಲ ಮಾಡಿರುವುದು ಗೊತ್ತಿದ್ದ ತಂದೆ ಸತೀಶಕುಮಾರ್ ಒಂದಷ್ಟು ಸಾಲ ತೀರಿಸುತ್ತಿದ್ದರು. ಮತ್ತೆ ತಂದೆಗೆ ಕರೆ ಮಾಡಿ 30 ಸಾವಿರ ಕಳಿಸುವಂತೆ ಬೇಡಿಕೆ ಸಲ್ಲಿಸಿದ್ದ. ನಾಳೆ ಕೊಡುವುದಾಗಿ ಹೇಳಿದ್ದರು. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, 'ಆನ್‌ಲೈನ್ ಜೂಜಾಟದಿಂದ 70 ಲಕ್ಷದಿಂದ 80 ಲಕ್ಷ ಹಣ ಕಳೆದುಕೊಂಡಿದ್ದ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದರು.
            
            
            Kalaburagi 22 year old youth commit suicide after loss of 80 lakhs in online gambling. Disease as be identified as Somnath chidri.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm