ಬ್ರೇಕಿಂಗ್ ನ್ಯೂಸ್
10-12-24 11:34 am HK News Desk ಕರ್ನಾಟಕ
ಬೆಂಗಳೂರು, ಡಿ.10: ದೇಶ ಕಂಡ ಅಪರೂಪದ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬೆಂಗಳೂರನ್ನು ಐಟಿ ಸಿಟಿ - ಸಿಲಿಕಾನ್ ಸಿಟಿಯಾಗಿ ಬೆಳೆಸುವಲ್ಲಿ ಭದ್ರ ಬುನಾದಿಯಿಟ್ಟ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (ಎಸ್.ಎಂ ಕೃಷ್ಣ) ಇನ್ನು ನೆನಪು ಮಾತ್ರ. 93 ವರ್ಷದ ಎಸ್ಸೆಂ ಕೃಷ್ಣ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ಮಂಗಳವಾರ (ಡಿಸೆಂಬರ್ 10) ನಸುಕಿನ 2:30ರ ಸುಮಾರಿಗೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಪ್ರೇಮಾ ಅವರನ್ನು ಮದುವೆಯಾಗಿದ್ದ ಕೃಷ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಾಫಿ ಡೇ ಮಾಲೀಕರಾಗಿದ್ದ ಸಿದ್ದಾರ್ಥ ಒಬ್ಬ ಅಳಿಯ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಪ್ರಭಾವಿ ಒಕ್ಕಲಿಗ ಕುಟುಂಬದಲ್ಲಿ ಜನಿಸಿದ್ದ ಎಸ್.ಎಂ ಕೃಷ್ಣ ಅವರ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಎಂದಾಗಿತ್ತು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಸ್ವತಂತ್ರ ಅಭ್ಯರ್ಥಿಯಾಗಿ ರಾಜಕೀಯ ಪ್ರವೇಶ
1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲ್ಲುವ ಮೂಲಕ ಕೃಷ್ಣ ರಾಜಕೀಯ ಜೀವನಕ್ಕೆ ಕಾಲಿರಿಸಿದ್ದರು. ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರ್ಪಡೆಯಾಗಿದ್ದರು. ಆದರೆ ಆನಂತರದ 1967ರ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಲ್ಲೇ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋತಿದ್ದರು. 1968ರಲ್ಲಿ ಹಾಲಿ ಸಂಸದ ನಿಧನರಾದಾಗ ಎಸ್ಸೆಂ ಕೃಷ್ಣ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಕಾಲಿಟ್ಟಿದ್ದರು.
1968ರ ಬಳಿಕ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಕಾರ್ಯ ನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಮಾಡುವಲ್ಲಿ ಎಸ್.ಎಂ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದರು. ಆನಂತರ, ವಿಧಾನ ಪರಿಷತ್ತಿಗೆ ಆಯ್ಕೆಗೊಂಡು ಸಚಿವರಾಗಿದ್ದರು. 1983ರಲ್ಲಿ ಉದ್ಯಮ ಖಾತೆ, 84ರಲ್ಲಿ ವಿತ್ತ ಖಾತೆಯ ಸಚಿವರಾಗಿದ್ದರು. 89ರಿಂದ 1992ರ ನಡುವೆ ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿಯೂ ಕೆಲಸ ಮಾಡಿದ್ದರು.
ಸಿಲಿಕಾನ್ ಸಿಟಿಯಾಗಿಸಿದ್ದೇ ಕೃಷ್ಣ
1996 ರಲ್ಲಿ ರಾಜ್ಯಸಭೆಗೆ ನೇಮಕಗೊಂಡಿದ್ದ ಎಸ್ಸೆಂ ಕೃಷ್ಣ ಅವರು, 99ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅದೇ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ್ದಲ್ಲದೆ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದರು. ಆ ಸಂದರ್ಭದಲ್ಲಿ ಎಸ್ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬಿತ್ತು. 99ರಿಂದ 2004ರ ವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದಲ್ಲದೆ, ವಿದೇಶದಲ್ಲಿ ಕಲಿತು ಬಂದ ಅನುಭವದಿಂದ ಬೆಂಗಳೂರು ನಗರವನ್ನು ಐಟಿ ಸಿಟಿಯಾಗಿ ಬೆಳೆಸುವಲ್ಲಿ ಕೊಡುಗೆ ಕೊಟ್ಟಿದ್ದಾರೆ. ಸಿಂಗಾಪುರ ಮಾಡುತ್ತೇನೆಂಬ ಕನಸು ಕಟ್ಟಿದ್ದಲ್ಲದೆ, ವಿದೇಶಿ ಕಂಪನಿಗಳನ್ನು ಆಕರ್ಷಿಸಿ ಹೂಡಿಕೆ ಮಾಡುವಂತೆ ಶ್ರಮಿಸಿದ್ದರು.
ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಎನಿಸಿಕೊಂಡಿದ್ದರೂ 2004ರ ಡಿಸೆಂಬರ್ನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೃಷ್ಣ ಅವರನ್ನು ದಿಢೀರ್ ಆಗಿ ಸಕ್ರಿಯ ರಾಜಕಾರಣದಿಂದಲೇ ಹೊರಗಿಟ್ಟು ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಿಸಿತ್ತು. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗಲೇ 2008 ರ ಮಾರ್ಚ್ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಮುನಿಸು ತೋರಿಸಿದ್ದರು. ನಂತರ ಅವರನ್ನು ರಾಜ್ಯಸಭೆಗೆ ಆಯ್ಕೆಗೊಳಿಸಿ, 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಾಡಲಾಗಿತ್ತು. ಹಿಂದಿನ ವಿದೇಶಾಂಗ ಸಚಿವರ ನಿಧನದಿಂದ ಎಸ್ಸೆಂ ಕೃಷ್ಣ ಆ ಜಾಗಕ್ಕೆ ಸೂಕ್ತ ವ್ಯಕ್ತಿಯೆಂದು ಪರಿಗಣಿಸಿ ಹುದ್ದೆ ನೀಡಲಾಗಿತ್ತು. ವಿದೇಶಾಂಗ ಸಚಿವ ಸ್ಥಾನವನ್ನೂ ಯಶಸ್ವಿಯಾಗಿ ಮುನ್ನಡೆಸಿದ್ದಲ್ಲದೆ, ಅಮೆರಿಕದಲ್ಲಿ ಎರಡು ಬಾರಿ ಭಾರತವನ್ನು ಪ್ರತಿನಿಧಿಸಿ ಭಾಷಣ ಮಾಡಿದ್ದರು. ವಿದೇಶ ಮಂತ್ರಿಯಾಗಿ ಕರ್ನಾಟಕದ ಒಬ್ಬ ರಾಜಕಾರಣಿ ಗಮನಸೆಳೆದಿದ್ದು ಅದೇ ಮೊದಲಾಗಿತ್ತು.
2012ರ ಬಳಿಕ ಕಾಂಗ್ರೆಸ್ ಕೇಂದ್ರ ನಾಯಕರ ಜೊತೆಗೆ ಎಸ್ಸೆಂ ಕೃಷ್ಣ ಒಡನಾಟ ಚೆನ್ನಾಗಿರಲಿಲ್ಲ. ರಾಹುಲ್ ಗಾಂಧಿ ಯಾವುದೋ ಸಂದರ್ಭದಲ್ಲಿ ಮರ್ಯಾದೆ ಕೊಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡಿ…
Former Karnataka Chief Minister S.M. Krishna passed away at his residence early Tuesday (December 10, 2024) morning, his family said.
18-01-25 05:05 pm
Bangalore Correspondent
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
18-01-25 06:20 pm
HK News Desk
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
18-01-25 09:27 pm
Mangalore Correspondent
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
19-01-25 12:13 pm
HK News Desk
Mangalore Kotekar bank robbery, Update, Crime...
18-01-25 10:47 pm
Sullia, Mangalore crime: ಸುಳ್ಯ ; ಕುಡಿದ ಅಮಲಿನಲ...
18-01-25 10:28 am
Kotekar Bank Robbery, Latest Update, Mangalor...
17-01-25 07:58 pm
Kotekar Bank Robbery, Mangalore Crime; ಬೀದರ್...
17-01-25 03:02 pm