Murudeshwara beach drowning bhatkal: ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ; ಒಬ್ಬಳ ಶವ ಪತ್ತೆ , ಮೂವರು ಕಾಣೆ, ಠುಸ್ ಆದ ಸಚಿವ ಮಂಕಾಳು ವೈದ್ಯ ಅಶ್ವಾಸನೆ!

10-12-24 10:03 pm       HK News Desk   ಕರ್ನಾಟಕ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ. 

ಭಟ್ಕಳ, ಡಿ 10: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ. 

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆದಿದೆ. 

ಮುರುಡೇಶ್ವರ ಬೀಚ್ನಲ್ಲಿ ಇಂದು ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿಕೊಂಡು ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನುಳಿದಂತೆ ದೀಕ್ಷ, ಲಾವಣ್ಯ, ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ರಕ್ಷಿಸಲಾಗದೆ ಅಸಹಾಯಕರಾದ ಲೈಫ್ ಗಾರ್ಡ್ಸ್ ; 

ಇನ್ನು ಕಳೆದ ಎರಡು ತಿಂಗಳಿನಿಂದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನ ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯಕರಾಗಿದ್ದಾರೆ. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಸುದ್ದಿ ಮಾಡಿದ್ದರೂ ಸಹ ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೆವೆ ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆಯನ್ನು ಸಚಿವ ಮಂಕಾಳು ವೈದ್ಯ ನೀಡಿದ್ದರು. ಆದ್ರೆ ಅದು ಭರವಸೆಯಾಗಿಯೇ ಉಳಿದಿದೆ.

ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ದರು. ಆದರೂ ಸಹ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್​ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕಾಡಳಿತ‌ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದ್ರೆ ಸುರಕ್ಷತೆ ಕ್ರಮ ಕೈಗೊಂಡಿಲ್ಲ.

For girl students drawn at beach in murudeshwara in bhatkal. Among which the lifeguards have found one dead body and the search is going on for 3 others.