ಬ್ರೇಕಿಂಗ್ ನ್ಯೂಸ್
10-12-24 10:32 pm HK News Desk ಕರ್ನಾಟಕ
ಬೆಳಗಾವಿ, ಡಿ.10: 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿಗರ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ್ದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೋರಾಟದ ನೇತೃತ್ವ ವಹಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಂಘರ್ಷ ಯಾತ್ರೆ ಘೋಷಿಸುತ್ತಿದ್ದಂತೆ ಜನರು ಪೊಲೀಸರ ಸರ್ಪಗಾವಲನ್ನು ಭೇದಿಸಿ ನುಗ್ಗಿದ್ದಾರೆ. ಈ ವೇಳೆ, ಪೊಲೀಸರು ಲಾಟಿ ಚಾರ್ಜ್ ಮಾಡಿದ್ದು ಹಲವರು ಗಾಯಗೊಂಡಿದ್ದಾರೆ.
ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಲಾಠಿ ಬೀಸಿದ್ದಾರೆ. ಪ್ರತಿಭಟನಾ ನಿರತರಲ್ಲಿ ಕೆಲವರು ಪೊಲೀಸ್ ವಾಹನಕ್ಕೆ ಕಲ್ಲು ತೂರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ವಾಮೀಜಿ, ಯತ್ನಾಳ್ ಸೇರಿ ಹಲವರು ಹೆದ್ದಾರಿಯಲ್ಲೇ ಧರಣಿ ಕುಳಿತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದು ಸಚಿವರಾದ ಹೆಚ್.ಸಿ.ಮಹಾದೇವಪ್ಪ, ವೆಂಕಟೇಶ, ಲಕ್ಷ್ಮಿ ಹೆಬ್ಬಾಳ್ಕರ್, ಡಾ.ಎಂ.ಸಿ.ಸುಧಾಕರ್ ಮುಖ್ಯಮಂತ್ರಿಗಳ ಪರವಾಗಿ ಮನವೊಲಿಕೆಗೆ ಮುಂದಾದರೂ ಒಪ್ಪಲಿಲ್ಲ.
ಸ್ವಾಮೀಜಿ ಸೇರಿ ಹಲವರು ಪೊಲೀಸ್ ವಶಕ್ಕೆ
ಮುಖ್ಯಮಂತ್ರಿ ಸ್ಥಳಕ್ಕೆ ಬರಬೇಕು. ಇಲ್ಲವೇ ನಾವೇ ಸೌಧಕ್ಕೆ ಹೋಗುತ್ತೇವೆ ಎಂದು ಸ್ವಾಮೀಜಿ ಘೋಷಣೆ ಹಾಕುತ್ತಿದ್ದಂತೆ ಸೇರಿದ್ದ ಜನರು ನಾ ಮುಂದು, ತಾ ಮುಂದು ಎಂದು ಮುನ್ನುಗ್ಗಿದರು. ಪೊಲೀಸರು ತಡೆದಿದ್ದರಿಂದ ಸ್ವಾಮೀಜಿ, ಯತ್ನಾಳ್, ಅರವಿಂದ ಬೆಲ್ಲದ್, ಈರಣ್ಣ ಕಡಾಡಿ ಸೇರಿ ಮತ್ತಿತರರನ್ನು ನಡು ರಸ್ತೆಯಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಮಾಯಕರ ಮೇಲೆ ದೌರ್ಜನ್ಯ
ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, "ಈ ರೀತಿ ಸಮಾಜ ಬಾಂಧವರ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ. ಅಮಾಯಕರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ಬ್ರಿಟಿಷ್ ಸರ್ಕಾರ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕಲಾಗಿದೆ. ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಇದು ಕಾನೂನಿಗೆ ವಿರುದ್ಧವಾಗಿದ್ದು, ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ನಮ್ಮ ಹೋರಾಟದ ಶಕ್ತಿ ಕುಂದಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, "ಹೋರಾಟ ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರದಲ್ಲಿರುವ ನಮ್ಮದೇ ಸಮಾಜದ ಕೆಲ ಕಿಡಿಗೇಡಿಗಳು ಮಾಡಿಸಿದ ಕೆಲಸವಿದು. ಮುಂದಿನ ಹೋರಾಟದ ಬಗ್ಗೆ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು. ಇದಕ್ಕೂ ಮುನ್ನ ಪ್ರತಿಭಟನೆಗೆ ಕೈಜೋಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತಿತರರು, ಆನಂತರ ಅಧಿವೇಶನಕ್ಕೆಂದು ತೆರಳಿದ್ದರು.
ಪ್ರತಿಭಟನೆಯಲ್ಲಿ ಅಂದಾಜು 20 ಸಾವಿರಕ್ಕೂ ಅಧಿಕ ಜನ ಸೇರಿದ್ದರು. ಅಷ್ಟು ಜನ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಎರಡು ಬದಿಯಲ್ಲಿ ಸುಮಾರು 30 ಕಿ.ಮೀ. ವರೆಗೆ ಸರತಿ ಸಾಲಿನಲ್ಲಿ ವಾಹನಗಳು ನಿಂತಿದ್ದವು. ವಾಹನ ಸವಾರರು 2 ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೆ ಪರದಾಡಬೇಕಾಯಿತು.
A protest by the Panchamasali community demanding reservation under the 2A category turned violent in Karnataka’s Belagavi on Tuesday as protesters jumped over barricades and tried to barge into the Suvarna Vidhana Soudha where the winter session of the legislature is being held. The police resorted to mild caning, resulting in injuries to more than 10 people.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm