ಬ್ರೇಕಿಂಗ್ ನ್ಯೂಸ್
10-12-24 10:47 pm HK News Desk ಕರ್ನಾಟಕ
ಮೂಡುಬಿದಿರೆ, ಡಿ.10 : ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ 'ವಿರಾಸತ್' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಣ್ಣಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯಲ್ಲಿ ಡಿ.11 ರಿಂದ 15ರ ವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ '30ನೇ ವರ್ಷದ 'ಅಳ್ವಾಸ್ ವಿರಾಸತ್'' ಉದ್ಘಾಟಿಸಿ ಅವರು ಮಾತನಾಡಿದರು.
ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ. ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವು ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು ಎಂದರು. ಆಳ್ವಾಸ್ ಕೃಷಿ ಮೇಳ ಕಂಡು ನೀವೂ ಸಣ್ಣ ಕೈತೋಟ ಮಾಡಿ. ಮಣ್ಣು, ಪರಿಸರ ಪ್ರೀತಿಸಿ ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಆಳ್ವರ ದೃಷ್ಟಿಯೇ ಕ್ರಿಯೆಯಾಗಿ ಇಲ್ಲಿ ರೂಪುಗೊಂಡಿದೆ ಎಂದರು. ನಾನು ಅವರನ್ನು ನಾಲ್ಕು ದಶಕಗಳಿಂದ ಕಂಡಿದ್ದೇನೆ. ಅವರ ಪ್ರಯೋಗ ಇಂದು ನಾಡಿಗೆ ಕೊಡುಗೆ ನೀಡಿದೆ ಎಂದರು. ಆಳ್ವಾಸ್ ಆವರಣವು ಚಂದಮಾಮದ ಅಮರಾವತಿ ಹಾಗೂ ಇಂದ್ರ ನಗರಿಯ ನೆನಪಿಸುತ್ತದೆ. ಹೊಸ ಲೋಕವೇ ಇಲ್ಲಿ ಸೃಷ್ಟಿಯಾಗಿದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು ಊರಿಗೆ ಸೀಮಿತವಾಗಿದ್ದ ವಿರಾಸತ್ ಇಂದು ರಾಷ್ಟ್ರೀಯ ಹಬ್ಬವಾಗಿದೆ. ಇಂದು ದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 52 ಕೋಟಿ ಇದೆ. ಯುವ ಸಂಪತ್ತು ಬಗ್ಗೆ ನಾವು ಯೋಚಿಸಬೇಕು ಎಂದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಸಾಂಸ್ಕೃತಿಕ ತರಬೇತಿ ನೀಡುತ್ತಿದ್ದೇವೆ. ಮಂಗಳೂರು ವಿಶ್ವವಿದ್ಯಾನಿಲಯದ 49 ಅಥ್ಲೆಟಿಕ್ಸ್ ದಾಖಲೆ ಆಳ್ವಾಸ್ ಹೆಸರಿನಲ್ಲಿದೆ ಎಂದು ಸಂತಸ ಹಂಚಿಕೊಂಡರು.
ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದರು. ವಿರಾಸತ್ ಅನ್ನು ಸಮಗ್ರವಾಗಿ ರೂಪಿಸಲಾಗಿದ್ದು, ಪಂಚೇಂದ್ರಿಯಗಳಿಗೆ ಜ್ಞಾನ ನೀಡುವ ಕಾರ್ಯಕ್ರಮವಾಗಿದೆ. ಯುವಕರು, ಹಿರಿಯರು, ವೃದ್ಧರೆಲ್ಲರಿಗೂ ವಿರಾಸತ್ ಮುದ ನೀಡಲಿದೆ ಎಂದರು.
ಆರಂಭದಲ್ಲಿ ಗಿರಿಧರ್ ಅವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಮೂಡಿದ ‘ಬೆಳಕಾಗಿ ಬಾ’ ಹಾಗೂ ಡಾ.ಎನ್.ಕೆ. ಪದ್ಮನಾಭ ವಿರಚಿತ ‘ಪರಹಿತ ಬಯಸೋ’ ಪ್ರಾರ್ಥನೆಯನ್ನು ಹಾಡಲಾಯಿತು. ಆಳ್ವಾಸ್ ವಿರಾಸತ್ 30ನೇ ವರ್ಷದ ಹಿನ್ನೆಲೆಯಲ್ಲಿ ಅಂಚೆ ಇಲಾಖೆ ಹೊರತಂದಿರುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಸಂಸ್ಥೆಯ ಕಿಶೋರ್ ಆಳ್ವ, ಕಟೀಲು ದೇಗುಲ ಮೊಕ್ತೇಸರ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಉದ್ಯಮಿ ಶಶಿಧರ ಶೆಟ್ಟಿ, ಬೆಂಗಳೂರು ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ ನ ಎಂ.ರವೀಂದ್ರನಾಥ ಆಳ್ವ, ಪ್ರದೀಪ್ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆ ಗ್ರಾಪಂ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್ ಕೊಠಾರಿ, ಜಯಶ್ರೀ ಅಮರನಾಥ ಶೆಟ್ಟಿ ಮತ್ತಿತರರಿದ್ದರು.
ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಉದ್ಘಾಟನೆಗೊಂಡಿದ್ದು, ಡಿ.15ರ ವರೆಗೆ ನಡೆಯಲಿವೆ.
Dharmasthala pattadhikari and Rajya Sabha Member D. Veerendra Heggade on Tuesday said the virasat, with a variety of cultural programmes and exhibitions, broadens one’s outlook to the Global level and fills everyone’s hearts.
11-12-24 10:48 pm
Bangalore Correspondent
ಸಜ್ಜನ ರಾಜಕಾರಣಿಯ ಯುಗಾಂತ್ಯ ! ಪಂಚಭೂತಗಳಲ್ಲಿ ಲೀನರ...
11-12-24 07:28 pm
Murdeshwar beach drowning, Kolar: ಮುರುಡೇಶ್ವರ...
11-12-24 04:45 pm
Bangalore Techie Suicide, Crime: ಪತ್ನಿ ಕಿರುಕು...
11-12-24 01:51 pm
Alvas Virasat 2024: 30ನೇ ವರ್ಷದ ಆಳ್ವಾಸ್ ವಿರಾಸತ...
10-12-24 10:47 pm
11-12-24 05:44 pm
HK News Desk
Mumbai Bus Accident; ಮುಂಬೈನಲ್ಲಿ ಬೆಸ್ಟ್ ಸಂಸ್ಥೆ...
10-12-24 10:57 pm
Idli Guru, Franchise Fraud, Owner Karthik She...
09-12-24 10:12 pm
Assad dynasty; ಸಿರಿಯಾದಲ್ಲಿ 54 ವರ್ಷಗಳ ವಂಶಾಡಳಿತ...
09-12-24 12:17 pm
ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ ; ಭಾ...
05-12-24 11:00 pm
11-12-24 06:51 pm
Mangalore Correspondent
Mangalore, White Doves: 15 ವರ್ಷಗಳ ಬಳಿಕ ಮರಳಿ ಕ...
11-12-24 01:26 pm
Mangalore Lawyers, Sports: ಮಂಗಳೂರಿನಲ್ಲಿ ಹೈಕೋರ...
10-12-24 09:37 pm
Ranjith Ballal Bike Accident, Kundapur, Manga...
09-12-24 11:05 pm
Swamiji, Mangalore, Waqf: ಬಾಂಗ್ಲಾ ವಿರುದ್ಧ ಇಸ್...
09-12-24 07:40 pm
11-12-24 10:39 pm
Udupi Correspondent
Mangalore crime cyber fraud: ಪಾರ್ಟ್ ಟೈಮ್ ಜಾಬ್...
11-12-24 03:57 pm
Mangalore CCB police, Crime: ಜೈಲಿನಿಂದ ಹೊರಬಂದ...
10-12-24 11:18 pm
Mangalore crime, Kadri police, robbery: ಕಂಕನಾ...
10-12-24 06:46 pm
ಕೇವಲ ಎಂಟು ತಿಂಗಳಲ್ಲಿ 300ಕ್ಕೂ ಹೆಚ್ಚು ಯುವಕರಿಗೆ ವ...
10-12-24 03:59 pm