Actor Darshan Bail, Protest Chitradurga; ನಟ ದರ್ಶನ್‌ಗೆ ಬೇಲು ; ಅಲ್ಲು ಅರ್ಜುನ್‌ಗೆ 14 ದಿನ ಜೈಲು, ದಾಸನ ವಿರುದ್ಧ ಚಿತ್ರದುರ್ಗದಲ್ಲಿ ಭುಗಿಲೆದ್ದ ಆಕ್ರೋಶ, ಗಲ್ಲಿಗೇರಿಸಿ ಎಂದು ಘೋಷಣೆ ಕೊಗಿ ರಂಪಾಟ ! 

13-12-24 06:14 pm       Bangalore Correspondent   ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್‌ ಸಿಕ್ಕಂತಾಗಿದೆ.

ಬೆಂಗಳೂರು, ಡಿ 12: ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ರೆಗ್ಯುಲರ್‌ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್‌ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಪ್ರಕಟಿಸಿದೆ. ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.

Bengaluru Court Denies Bail Pleas of Actor Darshan And Pavithra Gowda

ಹೈಕೋರ್ಟ್‌ಗೆ ಹೋಗಿ ಬೇಲ್‌ ತಗೆದುಕೊಂಡ ನಟ ಕೆಳ ಹಂತದ ನ್ಯಾಯಾಲಯವು ನಟ ದರ್ಶನ್‌ ಹಾಗೂ ಇತರೆ ಆರೋಪಿಗಳಿಗೆ ಜಾಮೀನು ನಿರಾಕರಣೆ ಮಾಡಿತ್ತು. ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ದರ್ಶನ್‌ ಪರ ಸಿವಿ ನಾಗೇಶ್‌, ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್‌, ದರ್ಶನ್‌ ಕಾರು ಚಾಲಕ ಎಂ ಲಕ್ಷ್ಮಣ್‌ ಪರವಾಗಿ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಪ್ರದೋಶ್‌ ಪರವಾಗಿ ವಕೀಲ ಕೆ ದಿವಾಕರ್‌ ವಕಾಲತ್ತು ವಹಿಸಿದ್ದರು. ಪೊಲೀಸ್‌ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಅವರು ವಾದ ಮಂಡನೆ ಮಾಡಿದ್ದರು.

Powers and functions of the Supreme Court - iPleaders

ಪೊಲೀಸರ ಮುಂದಿನ ನಡೆ ಏನು?

ಈಗಾಗಲೇ ನಟ ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಸರ್ಕಾರ (ಪೊಲೀಸ್‌ ಇಲಾಖೆ) ಹೋಗಿದೆ. ಮುಂದುವರೆದು ಎಲ್ಲಾ ಆರೋಪಿಗಳ ಅಥವಾ ಎ 1, ಎ 2 ಆಗಿರುವ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ಸಾಮಾನ್ಯ ಜಾಮೀನನನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ

ಇನ್ನು ನೆಚ್ಚಿನ ನಟನಿಗೆ ಜಾಮೀನು ದೊರೆತಿರುವುದಕ್ಕೆ ಸೆಲಬ್ರಿಟಿಗಳಾದ ನಿರ್ದೇಶಕ ತರುಣ್ ಸುಧೀರ್ ಆದಿಯಾಗಿ ಅಭಿಮಾನಿಗಳು, ಹಿತೈಶಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಆದರೆ ಚಿತ್ರದುರ್ಗದಲ್ಲಿ ನಟ ದರ್ಶನ್ ಗೆ ಜಾಮೀನು ನೀಡುವುದಕ್ಕೆ ಕೆಲವೊಂದು ಪ್ರದೇಶದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ.

ಚಿತ್ರದುರ್ಗ ನಗರದಲ್ಲಿ ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿರುವ ಸಾರ್ವಜನಿಕರು, ದರ್ಶನ್ ಫೋಟೋ ಇರುವ ಪ್ರತಿಕೃತಿಗಳಿಗೆ ಚಪ್ಪಲಿಯಿಂದ ಥಳಿಸಿ, ಬೆಂಕಿ ಹಚ್ಚುವ ಮೂಲಕ ಜಾಮಿನು ದೊರೆತಿದ್ದನ್ನು ವಿರೋಧಿಸಿದ್ದಾರೆ.

ಇದೇ ವೇಳೆ ದರ್ಶನ್ ನ್ನು ಗಲ್ಲಿಗೇರಿಸಿ ಎಂಬ ಘೋಷಣೆ ಕೂಗಿದ್ದಾರೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

Allu Arjun remanded for 14 days in stampede death case, actor to move HC -  INDIA - GENERAL | Kerala Kaumudi Online

Allu Arjun Gets Bail Hours After Arrest. Court Cites "Right To Liberty"

ಅಲ್ಲು ಅರ್ಜುನ್‌ಗೆ 14 ದಿನ ಜೈಲು ; ಮಧ್ಯಂತರ ಜಾಮೀನು ಮಂಜೂರು

ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನದ ಬೆನ್ನಲ್ಲೇ ಮಧ್ಯಂತರ ಜಾಮೀನು ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧನದ ಭೀತಿಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಪುಷ್ಪ 2 ಸಿನಿಮಾ ಬಿಡುಗಡೆಗೆ ಮುನ್ನ ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪ್ರೀಮಿಯರ್ ಪ್ರದರ್ಶನದ ವೇಳೆ ಉಂಟಾಗಿದ್ದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ರನ್ನು ಬಂಧಿಸಲಾಗಿತ್ತು.

Pushpa 2: Netizens React To Allu Arjun's Arrest Over Film's Premiere  Stampede Incident - News18

ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ 13 ಜನರ ಮೇಲೆ ಪ್ರಕರಣ ದಾಖಲಾಗಿದ್ದು ಅಲ್ಲು ಅರ್ಜುನ್‌ ಎ11 ಆರೋಪಿಯಾಗಿ ಹೆಸರಿಸಲಾಗಿದೆ. ಶುಕ್ರವಾರ ಅಲ್ಲು ಅರ್ಜುನ್‌ರನ್ನು ಪೊಲೀಸರು ಬಂಧಿಸಿದ್ದು, ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ಕೋರ್ಟ್‌ಗೆ ಹಾಜರುಪಡಿಸಿದರು.

ವಾದ ಆಲಿಸಿದ ತೆಲಂಗಾಣ ಹೈಕೋರ್ಟ್ ಆರೋಪಿ ಅಲ್ಲು ಅರ್ಜುನ್‌ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು. ನ್ಯಾಯಾಲಯದ ಅದೇಶದ ಬಳಿಕ ಅಲ್ಲು ಅರ್ಜುನ್‌ರನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

Telangana High Court slams 'unusual haste' by state in Etela probe

Allu Arjun seen smiling, drinking coffee during arrest in Sandhya Theatre  Stampede case | Telugu Movie News - Times of India

ಕೋರ್ಟ್‌ಗೆ ಮನವಿ ಮಾಡಿದ್ದ ಅಲ್ಲು ಅರ್ಜುನ್ ;

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಅಲ್ಲು ಅರ್ಜುನ್ ಕೋರ್ಟ್ ಮೆಟ್ಟಿಲೇರಿದ್ದರು. ಡಿಸೆಂಬರ್ 11ರಂದು ತೆಲಂಗಾಣ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇನ್ನೂ ನಡೆಯಬೇಕಿದ್ದು ಅದಕ್ಕೂ ಮುನ್ನವೇ ಅಲ್ಲು ಅರ್ಜುನ್‌ರನ್ನು ಬಂಧಿಸಲಾಗಿತ್ತು.

ದೂರು ವಾಪಸ್ ;

ಅಲ್ಲು ಅರ್ಜುನ್ ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಲ್ಲು ಅರ್ಜುನ್‌ರನ್ನು ಬಂಧಿಸುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ಅವರನ್ನು ಬಂಧಿಸುವುದಾದರೆ ನಾನು ಪ್ರಕರಣ ವಾಪಸ್ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಒಂದು ವೇಳೆ ದೂರುದಾರರು ಕೇಸ್ ವಾಪಸ್ ಪಡೆದರೆ, ಅಲ್ಲು ಅರ್ಜುನ್‌ಗೆ ಬಂದಿರುವ ಸಂಕಷ್ಟ ಪರಿಹಾರವಾಗುವ ಸಾಧ್ಯತೆ ಇದೆ. ಸದ್ಯ ಅಲ್ಲು ಅರ್ಜುನ್‌ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕಾರಣ ಅವರು ಜೈಲಿನಲ್ಲಿ ಇರಬೇಕಾಗುತ್ತದೆ.

It seems that there has been a significant public outcry in Chitradurga following the recent development regarding actor Darshan's bail in a murder case. The protests indicate strong sentiments among some members of the public, with demonstrators expressing their anger by hitting his photos with footwear and setting them on fire. This type of reaction often stems from a perception of injustice or a belief that the legal system is not holding individuals accountable appropriately.