ಬ್ರೇಕಿಂಗ್ ನ್ಯೂಸ್
16-12-24 05:53 pm HK News Desk ಕರ್ನಾಟಕ
ಶಿವಮೊಗ್ಗ, ಡಿ.16: ವಿಶ್ವವಿಖ್ಯಾತ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ದಟ್ಟಣೆ ಕಡಿಮೆ ಮಾಡಲು ಶಿವಮೊಗ್ಗ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರ ವರೆಗೆ ಪ್ರವೇಶ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಎರಡೂವರೆ ತಿಂಗಳ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಶ ದೊರೆಯಲಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಸಮಗ್ರ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಕಾಮಗಾರಿ ಕಾರಣ ಪ್ರವಾಸಿಗರು ದಿನನಿತ್ಯ ಕಿರಿಕಿರಿ ಅನುಭವಿಸತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಹೀಗಾಗಿ ಪ್ರವಾಸಿಗರಿಗೆ ತೊಂದರೆಯಾಗದಂತೆ ಜ.1ರಿಂದ ಮಾ.15ರ ವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
The world-famous Jog Falls has been closed to tourists for two and a half months. The Shimoga district administration has taken this decision to reduce the influx of tourists in the wake of ongoing development work.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm