ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್‌ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್‌ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm