Tulsi Gowda passes away: ಪರಿಸರ ಪ್ರೇಮಿ, ವೃಕ್ಷ ಮಾತೆ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ನಿಧನ 

16-12-24 10:13 pm       HK News Desk   ಕರ್ನಾಟಕ

ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾರವಾರ, ಡಿ.16: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. 

ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

'Vriksha Mata' Tulsi Gowda, renowned for her environmental contributions, has passed away at the age of 86. Gowda, a member of the Halakki community, who was suffering from age-related ailments, breathed her last today (December 16) at her residence in Honnalli village in Ankola taluk of Uttara Kannada district.