ಬ್ರೇಕಿಂಗ್ ನ್ಯೂಸ್
17-12-24 05:39 pm HK News ಕರ್ನಾಟಕ
ಮೈಸೂರು, ಡಿ.17: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧವೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದರ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.
ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಹಿತ ದೂರು ನೀಡಿದ್ದರು.
ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ಯುವಕನೊಬ್ಬ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋ ಸಿಡಿಯನ್ನು ದೂರಿನೊಂದಿಗೆ ಲಗತ್ತಿಸಿದ್ದರು.
ಈ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿತ್ತು.
ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಬಂಡಿಪಾಳ್ಯ ನಿವಾಸಿಯಾಗಿದ್ದು ಎರಡು ದಶಕಗಳಿಂದ ಮಾಹಿತಿ ಹಕ್ಕು ಕಾರ್ಯಕರ್ತರಾಗಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುವಂತೆ ಮಾಡಿದ್ದರಿಂದ ಭಾರೀ ಸುದ್ದಿಯಲ್ಲಿದ್ದಾರೆ.
RTI activist Snehamayi Krishna has gone missing, and her mobile phone is switched off. A police search operation is currently underway. Recenty Right To Information (RTI) activist Snehamayi Krishna who is one of the complainants in the MUDA case based on which Governor Thaawarchand Gehlot gave consent for initiating an inquiry against the Chief Minister, had reiterated his demand that the probe be handed over to the Central Bureau of Investigation (CBI)
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am