ಬ್ರೇಕಿಂಗ್ ನ್ಯೂಸ್
20-12-24 10:43 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 20: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ, ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿತು.
ಪೊಲೀಸರು ಕಾನೂನು ಕ್ರಮ ಅನುಸರಿಸದೆ ಬಂಧಿಸಿರುವುದನ್ನು ಪ್ರಶ್ನಿಸಿ ಜಾಮೀನು ಅರ್ಜಿ ಸಲ್ಲಿಸಿದ್ದ ಸಿಟಿ ರವಿ ತಾನು ಬಿಡುಗಡೆಗೆ ಅರ್ಹ ಎಂದು ಹೇಳಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಂತರ ಆದೇಶ ನೀಡಿತು.
ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿತ್ತು. ಎಫ್ ಐಆರ್ ದಾಖಲಾದ ಬಳಿಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು.
ಪ್ರತಿವಾದ ಮಂಡಿಸಿದ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬೆಳ್ಳಿಯಪ್ಪ, ಬಂಧನಕ್ಕೂ ಮುನ್ನ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಬಂದಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಟಿ ರವಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬಾಕಿಯಿದ್ದು, ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಅಂತಿಮವಾಗಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ನ್ಯಾಯಾಧೀಶರು ಆದೇಶ ಪ್ರಕಟಿಸಿದರು.
ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದರು. ಈ ಮಧ್ಯೆಯೇ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು. ಈ ಮಧ್ಯೆಯೇ ಸಿಟಿ ರವಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
11 ಗಂಟೆಗೂ ಹೆಚ್ಚು ಕಾಲ ಅಲೆದಾಡಿಸಿದರು; ಪ್ರೆಸ್ ಮೀಟ್ ನಲ್ಲಿ ಸಿಟಿ ರವಿ ಕಣ್ಣೀರು;
“ಸುಳ್ಳು ಕೇಸ್ ಹಾಕಿ ನೋಟಿಸ್ ಕೊಡದೇ ನನ್ನನ್ನು ಬಂಧಿಸಿದರು. ಅಷ್ಟೇ ಅಲ್ಲ… ನಾಲ್ಕು ಜಿಲ್ಲೆ ಸುತ್ತಾಡಿಸಿ 50ಕ್ಕೂ ಹೆಚ್ಚು ಗ್ರಾಮಗಳು 11 ಗಂಟೆಗಳಿಗೂ ಹೆಚ್ಚು ಕಾಲ ಅಲೆದಾಡಿಸಿ ಮಾನಸಿಕವಾಗಿ ಕುಗ್ಗಿಸುವಂಥ ಪ್ರಯತ್ನವನ್ನು ಪೊಲೀಸರು ಮಾಡಿದ್ದು ನನಗೆ ತೀವ್ರವಾಗಿ ಘಾಸಿಯಾಗಿದೆ - ಹೀಗೆಂದು ವಿಧಾನ ಪರಿಷತ್ ಶಾಸಕ ಸಿಟಿ ರವಿಯವರು ಹೇಳಿಕೆ ಕೊಟ್ಟಿದ್ದಾರೆ.
ಕರ್ನಾಟಕ ಹೈಕೋರ್ಟ್ ನಿಂದ ಜಾಮೀನು ಆದೇಶದಂತೆ, ಬೆಳಗಾವಿಯಿಂದ ಬೆಂಗಳೂರಿಗೆ ಸಿಟಿ ರವಿಯವರನ್ನು ಕರೆತರುತ್ತಿದ್ದ ಖಾನಾಪುರದ ಪೊಲೀಸರು ಮಾರ್ಗ ಮಧ್ಯೆಯೇ ಅವರನ್ನು ಬಂಕಾಪುರದಲ್ಲಿ ಬಿಡುಗಡೆಗೊಳಿಸಿದರು. ಅಲ್ಲಿ ಅವರನ್ನು ಬಿಜೆಪಿ ನಾಯಕರಾದ ವಿಜಯೇಂದ್ರ, ಆರ್ ಅಶೋಕ್ ಸೇರಿದಂತೆ ಅನೇಕರು ಅಲ್ಲಿ ಸಿಟಿ ರವಿಯವರಿಗೆ ಜೊತೆಯಾದರು. ಅಲ್ಲಿಂದ ನೇರವಾಗಿ, ದಾವಣಗೆರೆ ತಲುಪಿದ ಸಿಟಿ ರವಿ ಹಾಗೂ ಬಿಜೆಪಿ ನಾಯಕರು, ಅಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನು ನಡೆಸಿದರು. ಆ ಸಂದರ್ಭದಲ್ಲಿ ಸಿಟಿ ರವಿಯವರನ್ನು ಸರ್ಕಾರ ನಡೆಸಿಕೊಂಡ ರೀತಿಯ ವಿರುದ್ಧ ಕಿಡಿಕಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಟಿ ರವಿ, ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವಂಥ ಕೆಲಸ ಮಾಡಲಾಗಿದೆ. ಬೆಳಗಾವಿಯನ್ನು ನನ್ನನ್ನು ಬಂಧಿಸಿದ್ದರು. ಜನಪ್ರತಿನಿಧಿಯಾದ ನೋಟಿಸ್ ಕೂಡ ನೀಡಿಲ್ಲ. ಅದು ನೀಡದೇ ಬಂಧಿಸಿದ್ದರು. ಆದರೆ, ಅಲ್ಲಿಂದ ಖಾನಾಪುರಕ್ಕೆ ಕರೆದೊಯ್ದ ಅವರು, ಅಲ್ಲಿಂದ ಬೆಂಗಳೂರಿಗೆ ಕರೆದೊಯ್ಯುತ್ತೇವೆ ಎಂದು ಹೇಳಿ, ಸುಮಾರು ನಾಲ್ಕು ಜಿಲ್ಲೆಗಳು, 50ಕ್ಕೂ ಹೆಚ್ಚು ಗ್ರಾಮಗಳ ಮೂಲ ಸುತ್ತಾಡಿಸಿ, 11 ಗಂಟೆಯ ಪ್ರಯಾಣದ ಬಳಿಕ ಮತ್ತೆ ಬೆಳಗಾವಿಗೆ ಕರೆತಂದಿದ್ದಾರೆ. ಈ ಮೂಲಕ ನನ್ನ ಆತ್ಮಸ್ಥೈರ್ಯವನ್ನು ಕುಂದಿಸುವ ಕೆಲಸವನ್ನು ಅವರು ಮಾಡಿದ್ದಾರೆ.
ಇಂಥ ಸಂದರ್ಭದಲ್ಲಿ, ನಮ್ಮ ಪಾರ್ಟಿ, ನಮ್ಮ ರಾಜ್ಯಾಧ್ಯಕ್ಷರು, ವಿಪಕ್ಷಗಳು, ಛಲವಾದಿ ನಾರಾಯಣಸ್ವಾಮಿ, ಎಲ್ಲಾ ಮುಖಂಡರು, ಶಾಸಕರು, ಸಂಸತ್ ಸದಸ್ಯರು, ಸಾಮಾನ್ಯ ಕಾರ್ಯಕರ್ತರು ನನ್ನ ಜತೆಗೆ ನಿಂತು ಆತ್ಮಸ್ಥೈರ್ಯ ತುಂಬಿದರು. ನಿಮ್ಮ ಜೊತೆಲ್ಲಿ ನಾವಿದ್ದವೆ ಎಂದಿದ್ದಾರೆ. ಎಲ್ಲರಗೂ ಧನ್ಯವಾದ ಎಂದು ಹೇಳಿದರು. ಸತ್ಯಮೇವ ಜಯತೆ ಬೆಳಗಾವಿಯಲ್ಲಿ ಹೇಳಿದ್ದೆ ಅದರಂತೆ ಜಯ ಸಿಕ್ಕಿದೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಸಂಭ್ರಮ ;
ಸಿ.ಟಿ.ರವಿ ಬಿಡುಗಡೆ ಆದೇಶದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಚಿಕ್ಕಮಗಳೂರು ನಗರದ ಬಸವನ ಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ನಿವಾಸದ ಮುಂಭಾಗ ಸೇರಿದ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಸಿ.ಟಿ.ರವಿ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಡಿಕೆಶಿ ವಿರುದ್ಧ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾರ್ಯಕರ್ತರು, ಶಾಸಕ ಸಿ.ಟಿ.ರವಿ ಪರ ಘೋಷಣೆ ಕೂಗುತ್ತಾ ಕುಣಿದು ಕುಪ್ಪಳಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.
A single-judge bench of the Karnataka High Court Friday granted interim bail to BJP Member of Legislative Council (MLC) C T Ravi, 58, in a case of sexual harassment filed in Belagavi on Thursday by sole woman minister in the Congress government, Laxmi Hebbalkar.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am