ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm