ಬ್ರೇಕಿಂಗ್ ನ್ಯೂಸ್
22-12-24 10:26 pm HK News Desk ಕರ್ನಾಟಕ
ಬೆಳಗಾವಿ, ಡಿ.22: ಯಾರ ನಿರ್ದೇಶನದ ಮೇರೆಗೆ ಠಾಣೆಯಿಂದ ಠಾಣೆಗೆ ಸಿ.ಟಿ ರವಿಯನ್ನು ಪೊಲೀಸರು ಸುತ್ತಾಡಿಸಿದ್ದಾರೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಈ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದ ಮೇಲೆ ರವಿಯನ್ನು ಬಂಧಿಸಲಾಗಿತ್ತು. ಗುರುವಾರ ರಾತ್ರಿಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದೆ. ಪೊಲೀಸರು ಸೂಚನೆಯಂತೆ ನಡೆದಿದ್ದರೆ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿರಲಿಲ್ಲ ಎಂದು ಹೇಳಿದರು.
ರವಿ ಅವರು ಯಾವುದೇ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಈ ಪ್ರಕರಣ ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ನಡೆದಾಗ ಮಾರ್ಷಲ್ ಗಳು ರಕ್ಷಣೆ ಮಾಡಿದ್ದಾರೆ. ಸೌಧದ ಒಳಗೆ ಅನೇಕ ಕಾರ್ಯಕರ್ತರು ಇರ್ತಾರೆ, ಇವರು ಇಂಥವರೇ ಅಂತಾ ಹೇಳುವುದು ಕಷ್ಟ. ದೂರು ದಾಖಲಾದ ಬಳಿಕವೇ ಸಿ.ಟಿ ರವಿ ಬಂಧನವಾಗಿದೆ ಎಂದು ತಿಳಿಸಿದರು.
ಸಿಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ನಂಗೆ ಗೊತ್ತಿಲ್ಲ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಆಗುತ್ತಿರಲಿಲ್ಲ, ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಮೊದಲ ಘಟನೆ ಇದು. ಹೀಗಾಗಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ ಎಂದರು.
ಇದೇ ವೇಳೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿಯವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆಂದು ಆರೋಪಿಸಿದರು. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆಯಷ್ಟೇ ಕೆಟ್ಟದಾಗಿ ಮಾತನಾಡಿಲ್ಲ, ಸಿದ್ದರಾಮಯ್ಯನವರ ಮೇಲೂ ಕೀಳು ಮಾತುಗಳನ್ನಾಡಿದ್ದಾರೆ, ಸದನದಲ್ಲಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ, ಬಿಜೆಪಿ ನಾಯಕರು ಅವರ ನಡತೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆ ನೀಡಿದ್ದರೆ ನಾನು ಖಂಡಿಸುತ್ತಿದ್ದೆ, ಆದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತಮ್ಮ ಪಕ್ಷದ ನಾಯಕರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆಂದು ಕಿಡಿಕಾರಿದರು.
Public Works Department Minister Satish Jarkiholi on Saturday said he was not aware on whose instructions BJP MLC CT Ravi was shifted from one station to another on Thursday night.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am