ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm