ಬ್ರೇಕಿಂಗ್ ನ್ಯೂಸ್
26-12-24 11:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ರಾಜ್ಯದ ಕಾಂಗ್ರೆಸ್ ಸರ್ಕಾರ ಹೊಸ ವರ್ಷದಲ್ಲಿ ಮತ್ತೆ ಜನಸಾಮಾನ್ಯರಿಗೆ ಗ್ಯಾರಂಟಿ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗಿರುವ ಜನರ ಮೇಲೆ ಹಾಲಿನ ದರವನ್ನೂ ಏರಿಸಿ ಹೊರೆ ಹೊರಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೆ ನಂದಿನಿ ಹಾಲಿನ ದರವನ್ನು ಹೊಸ ವರ್ಷದಿಂದಲೇ ಪ್ರತೀ ಲೀಟರ್ ಮೇಲೆ 5 ರೂ. ಏರಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಮುಂದಿಟ್ಟಿದೆ.
ಆರು ತಿಂಗಳ ಹಿಂದೆಯಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲು ದರವನ್ನು ಏರಿಸಲಾಗಿತ್ತು. ಇದೀಗ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಏರಿಸುವ ಕುರಿತು ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಎಲ್. ಭೀಮಾನಾಯ್ಕ ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಹೋಗಿದ್ದು, ಸರ್ಕಾರದ ಹಂತದಲ್ಲಿ ದರ ಏರಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಹೇಳಿದ್ದಾರೆ. ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿದ್ದು ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹೆಚ್ಚು ದರ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ದರ ಏರಿಕೆ ನಿರ್ಣಯ ಕೈಗೊಳ್ಳಲಿದ್ದಾರೆ ಎಂದವರು ಹೇಳಿದ್ದಾರೆ.
ಇದೇ ವೇಳೆ ಈ ಹಿಂದೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 50 ಎಂಎಲ್ ಹೆಚ್ಚುವರಿ ಹಾಲನ್ನು ಕಡಿತಗೊಳಿಸಿ ಅದರ ದರವನ್ನೂ 2 ರೂ.ನಷ್ಟು ಇಳಿಸಲಾಗುತ್ತದೆ ಎಂದು ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂ. ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆಗೆ ದರವನ್ನೂ ಹಿಂಪಡೆಯುವುದಾಗಿ ಭೀಮಾನಾಯ್ಕ್ ತಿಳಿಸಿದ್ದಾರೆ.
ಈ ಹಿಂದೆ ಜೂನ್ 25ರಂದು ಲೀಟರ್ ಹಾಲಿಗೆ 50 ಎಂಎಲ್ ಹಾಲು ಹೆಚ್ಚುವರಿ ಸೇರಿಸಿ ಎರಡು ರೂ. ಹೆಚ್ಚಿಸುವ ಘೋಷಣೆ ಮಾಡಲಾಗಿತ್ತು. ಜೂನ್ 26ರಿಂದಲೇ ಹೊಸ ತೀರ್ಮಾನ ಜಾರಿಗೆ ಬಂದಿತ್ತು. ಈ ವೇಳೆ ನೀಲಿ ಪ್ಯಾಕೆಟ್ ಸಾಮಾನ್ಯ ಹಾಲಿನ ದರವನ್ನು ಲೀಟರ್‌ಗೆ 44 ರೂ.ನಿಂದ 46 ರೂ.ಗೆ ಏರಿಕೆ ಮಾಡಲಾಗಿತ್ತು. 22 ರೂ. ಇದ್ದ 500 ಎಂಎಲ್ ಪ್ಯಾಕೆಟ್ ಹಾಲಿಗೂ 50 ಎಂಎಲ್ ಹೆಚ್ಚುವರಿ ಸೇರಿಸಿ ದರವನ್ನು 24 ರೂ.ಗೆ ಏರಿಸಲಾಗಿತ್ತು.
Speculation is rife over a possible rise in the price of Nandini milk marketed by Karnataka Milk Federation (KMF). While the federation has been under pressure from farmers to seek a price rise for sometime now, discussion to increase the price by ₹5 per litre is under way. On the other hand, there is also discussion about the possibility of withdrawing the additional 50 ml milk per sachet that is now being given, and bringing down the price by ₹2 per sachet.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm