ಬ್ರೇಕಿಂಗ್ ನ್ಯೂಸ್
29-12-24 06:29 pm HK News Desk ಕರ್ನಾಟಕ
ಬೆಂಗಳೂರು, ಡಿ 28: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು, ರಾಜಧಾನಿಯಲ್ಲಿ ಖಾಕಿ ಕಟ್ಟೆಚ್ಚರ ವಹಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದೆಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗುತ್ತಿದ್ದು, ಬಂದೋಬಸ್ತ್‌ಗೆ 11 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುತ್ತಿದೆ
ಹಿರಿಯ ಪೊಲೀಸ್ ಅಧಿಕಾರಿಗಳು ಬಿಬಿಎಂಪಿ, ಆರೋಗ್ಯ, ಅಬಕಾರಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಸ್ಕಾಂ, ಬಿಎಂಆರ್‌ಸಿಎಲ್ ಹಾಗೂ ಇತರೆ ಇಲಾಖೆಗಳು, ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಪೊಲೀಸರು ಆದ್ಯತೆಯಾಗಿ ಪರಿಗಣಿಸಿದ್ದು, ಕಟ್ಟೆಚ್ಚರ ವಹಿಸಿದ್ದಾರೆ.
ಕೇಂದ್ರ ವಿಭಾಗಕ್ಕೆ 2,572 ಪೊಲೀಸರು:
ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ, ಎಂ.ಜಿ.ರಸ್ತೆ, ಒಪೆರಾ ಜಂಕ್ಷನ್, ರಿಚ್ಮಂಡ್ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿಡಿ.31ರಂದು ರಾತ್ರಿ 5 ಡಿಸಿಪಿ, 18 ಎಸಿಪಿ, 41 ಇನ್‌ಸ್ಪೆಕ್ಟರ್‌ಗಳು ಸೇರಿದಂತೆ 2,572 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಪ್ರಮುಖ ಸ್ಥಳಗಳಲ್ಲಿಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ ಇರುವ ಮಹಿಳಾ ಸುರಕ್ಷಾ ಸ್ಥಳಗಳನ್ನು ತೆರೆಯಲಾಗಿದೆ.
817 ಸಿ.ಸಿ ಕ್ಯಾಮೆರಾ ಕಣ್ಗಾವಲು:
ಹೊಸ ವರ್ಷಾಚರಣೆ ವೇಳೆ ಹೆಚ್ಚಿನ ಜನ ಸೇರುವ ಪ್ರದೇಶಗಳಲ್ಲಿ 817 ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. 63 ವೀಕ್ಷಣಾ ಗೋಪುರ (ವಾಚ್ ಟವರ್), 114 ಮಹಿಳಾ ಸುರಕ್ಷತಾ ಐಲ್ಯಾಂಡ್, 48 ಪೊಲೀಸ್ ಕಿಯೋಸ್ಕ್, 54 ಹೆಲ್ತ್ ಸೆಂಟರ್‌ಗಳನ್ನು ತೆರೆಯಲಾಗುತ್ತದೆ. ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಕಿಯೋಸ್ಕ್‌ಗಳನ್ನು ತೆರೆಯಲಾಗುತ್ತಿದ್ದು, ಮಕ್ಕಳು ಕಾಣೆಯಾದಲ್ಲಿ ಮತ್ತು ಕಳವು ಸಂಬಂಧ ದೂರುಗಳಿಗೆ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿಈ ಕಿಯೋಸ್ಕ್‌ಗಳಿಂದ ಅಗತ್ಯ ಸೇವೆ ಪಡೆಯಬಹುದು. ಹೆಚ್ಚಿನ ಜನದಟ್ಟಣೆಯ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಿದ್ದು, ಇವುಗಳಲ್ಲಿಕಾರ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಬೈನಾಕ್ಯುಲರ್ ನೀಡಲಾಗಿದೆ.
ವಾಹನ ಸಂಚಾರ ನಿರ್ಬಂಧ:
ಡಿ.31 ರಂದು ರಾತ್ರಿ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿದ್ದು, ಸಾರ್ವಜನಿಕರಿಗೆ ನಡಿಗೆ ಮೂಲಕ ಏಕಮುಖ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಎಂ.ಜಿ.ರಸ್ತೆ ಪ್ರವೇಶಿಸುವವರಿಗೆ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಹಾಗೂ ಮೆಯೋಹಾಲ್ ಜಂಕ್ಷನ್ ಮೂಲಕ ಬ್ರಿಗೇಡ್ ರಸ್ತೆಗೆ ಏಕಮುಖವಾಗಿ ಚಲಿಸಿ ಒಪೆರಾ ಜಂಕ್ಷನ್‌ನಲ್ಲಿಹೊರ ಹೋಗಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು, ಆ ಸ್ಥಳಗಳಲ್ಲಿಅಳವಡಿಸಿರುವ ಲೋಹ ಶೋಧಕ ಬಾಗಿಲುಗಳು (ಡಿಎಫ್‌ಎಂಡಿ) ಮೂಲಕ ಪ್ರವೇಶಿಸಬೇಕು ಹಾಗೂ ಪೊಲೀಸ್ ತಪಾಸಣೆಗೆ ಸಹಕರಿಸಬೇಕಿದೆ.
ಡ್ರೋಣ್ ಕ್ಯಾಮೆರಾಗಳ ಕಣ್ಗಾವಲು:
ಹೊಸ ವರ್ಷಾಚರಣೆ ನಡೆಯುವ ಪ್ರ ಮುಖ ಸ್ಥಳಗಳಲ್ಲಿ ಪೊಲೀಸರು ಡಿ.31 ರಂದು ರಾತ್ರಿ ಡ್ರೋಣ್ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಿದ್ದಾರೆ. ಆ ಸ್ಥಳಗಳಲ್ಲಿ ಹೆಚ್ಚುವರಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜತೆಗೆ, ಶ್ವಾನದಳ ಹಾಗೂ 16 ವಿಶೇಷ ತಂಡಗಳಿಂದ ಜನರನ್ನು ತಪಾಸಣೆ ಮಾಡಲಾಗುತ್ತದೆ
ಡ್ರಗ್ಸ್ ಪಾರ್ಟಿಗಳ ಮೇಲೆ ನಿಗಾ:
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿರುವ ಮದ್ಯದ ಪತ್ತೆಗೆ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಲಿದ್ದಾರೆ. ನಗರದ ಹೊರವಲಯದಲ್ಲಿಅನಧಿಕೃತವಾಗಿ ರೇವ್ ಪಾರ್ಟಿ ಆಯೋಜನೆ, ಮಾದಕವಸ್ತು ಸೇವನೆಗೆ ಅವಕಾಶ ನೀಡುವುದರ ಬಗ್ಗೆಯೂ ನಿಗಾ ವಹಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳ ಪೂರೈಕೆ, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿಅಥವಾ ಸಾರ್ವಜನಿಕ ಸ್ಥಳಗಳಲ್ಲಿಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ 112 ಸಹಾಯವಾಣಿ ಸಂಖ್ಯೆಗೆ ಮಾಹಿತಿ ನೀಡಬಹುದು.
ಬಂದೋಬಸ್ತ್‌ಗೆ 11,830 ಸಿಬ್ಬಂದಿ:
ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿ, 44 ಎಸಿಪಿ, 135 ಇನ್‌ಸ್ಪೆಕ್ಟರ್, 530 ಪಿಎಸ್‌ಐ, 655 ಎಎಸ್‌ಐ, 4,833 ಮಂದಿ ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್‌ಗಳು, 1,048 ಮಹಿಳಾ ಪೊಲೀಸ್ ಸಿಬ್ಬಂದಿ, 597 ಮಂದಿ ಮಫ್ತಿ ಸಿಬ್ಬಂದಿ, 3,170 ಗೃಹರಕ್ಷಕ ದಳ ಸಿಬ್ಬಂದಿ ಹಾಗೂ 800 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸೇರಿ ಒಟ್ಟು 11,830 ಸಿಬ್ಬಂದಿಯನ್ನು ಹೊಸ ವರ್ಷಾಚರಣೆಯ ಬಂದೋಬಸ್ತ್ ನಿಯೋಜಿಸಲಾಗಿದೆ. ಜತೆಗೆ, 72 ಕೆಎಸ್‌ಆರ್‌ಪಿ ತುಕಡಿ ಹಾಗೂ 21 ಸಿಎಆರ್ ತುಕಡಿಗಳನ್ನು ಬಂದೋಬಸ್ತ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.
The Bengaluru Police are gearing up for New Year celebrations with extensive security measures. They aim to ensure public safety and smooth traffic flow in high-footfall areas. Celebrations are permitted until 1:00 am, and the public must adhere to this time limit.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm