ಹಾಸನ ; ಕೆರೆ ಬಳಿ ನ್ಯೂ ಇಯರ್ ಪಾರ್ಟಿ, ಮುಳುಗಿ ಇಬ್ಬರು ಯುವಕರು ಜಲಸಮಾಧಿ 

01-01-25 11:03 pm       HK News Desk   ಕರ್ನಾಟಕ

ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.

ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.

ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Two youths killed after Drowning inside the lake during new year party in Hassan. The deceased has been identified as Ajith and Ashok.