ಬ್ರೇಕಿಂಗ್ ನ್ಯೂಸ್
02-01-25 07:42 pm HK News Desk ಕರ್ನಾಟಕ
ಚಾಮರಾಜನಗರ, ಜ 02: ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿದ್ಯಾರ್ಥಿನಿಯರ ಕಾಲೇಜು ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್ (17) ಮೃತ ದುರ್ದೈವಿ.
ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಧ್ಯರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್‌ನನ್ನ ಬೆಳಗ್ಗೆ 8 ಗಂಟೆಯಲ್ಲಿ ಸ್ನೇಹಿತರು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಒಂದೇ ಆವರಣದಲ್ಲಿ ವಿದ್ಯಾರ್ಥಿನಿಯರ ಹಾಗೂ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಮಣಿತ್ ಹೋದ ಉದ್ದೇಶವೇನು ಗೊತ್ತಿಲ್ಲ, ವಿದ್ಯಾರ್ಥಿನಿಯೋರ್ವಳ ಕೊಠಡಿಯ ಕಿಟಕಿ ಬಳಿಯಿಂದ ಮಣಿತ್ ಬಿದ್ದಿದ್ದಾನೆ. ಮಧ್ಯರಾತ್ರಿಯಲ್ಲಿ ಮಣಿತ್‌ಗೆ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ ?
ವಾಚ್ ಮೆನ್‌ಗಳು ಗಮನಿಸಲಿಲ್ಲವೇ? ಪ್ರಿನ್ಸಿಪಾಲ್ ಮುನ್ನೆಚ್ಚರಿಕೆ ತೆಗೆದುಕೊಂಡಿರಲಿಲ್ಲವೇ? ಯಾರು ಬೇಕಾದರೂ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ಪ್ರವೇಶಿಸಬಹುದೇ? ಹಾಗಿದ್ದಲ್ಲಿ ಇಲ್ಲಿ ತಂಗಿರುವ ವಿದ್ಯಾರ್ಥಿಗಳ ರಕ್ಷಣೆ ಹೇಗೆ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗ್ತಿಲ್ಲ.
ಮಧ್ಯರಾತ್ರಿ ಬಿದ್ದು ನರಳಾಡುತ್ತಿದ್ದರೂ ಯಾರ ಗಮನಕ್ಕೂ ಬಂದಿಲ್ಲವೆಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬುದು ಎದ್ದು ತೋರಿಸುತ್ತದೆ . ಎರಡನೇ ಮಹಡಿ ಏರಿ ವಿದ್ಯಾರ್ಥಿನಿ ಕೊಠಡಿ ಬಳಿ ತಲುಪಿದ ಕಾರಣಾವಾದ್ರೂ ಏನು? ವಿದ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ? ಅಥವಾ ಪ್ರೇಮ ಪ್ರಸಂಗವೇ? ತನ್ನಿಷ್ಟದಂತೆ ನಡೆಯಲಿಲ್ಲವೆಂದು ಬಿದ್ದು ಆತ್ಮಹತ್ಯೆ ಮಾಡಿಕೊಂಡನೇ? ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದನೇ? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎನ್ನುವುದು ಸ್ಥಳೀಯರ ಹಾಗೂ ಪೋಷಕರ ಆಗ್ರಹ.
17 year old PU student dies after falling from second floor of girls hostel on new year in Chamarajanagar. The deceased has been identified as Manith.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm