ಬ್ರೇಕಿಂಗ್ ನ್ಯೂಸ್
02-01-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 02: ಇನ್ನೂ ಹೊಸ ವರ್ಷದ ಸಂಭ್ರಮಾಚರಣೆಯ ಮೂಡ್‌ನಲ್ಲಿರುವ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಆಘಾತ ನೀಡಿದೆ. ಕರ್ನಾಟಕದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಏರಿಕೆ ಮಾಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನ ಮಾಡಿದೆ. ಟಿಕೆಟ್ ದರ ಏರಿಕೆ ಮಾಡುವಂತೆ ಸಾರಿಗೆ ನಿಗಮಗಳು ಇಟ್ಟಿದ್ದ ಬೇಡಿಕೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌ಕೆ ಪಾಟೀಲ್, ಬಸ್ ಪ್ರಯಾಣ ದರ ಶೇ. 15ರಷ್ಟು ಹೆಚ್ಚಳಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡುವ ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಭಾರೀ ನಷ್ಟದಲ್ಲಿವೆ. ಈ ನಡುವೆ ಶಕ್ತಿ ಯೋಜನೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಶಕ್ತಿ ಯೋಜನೆ ಕೈಬಿಡದೆ ಅಥವಾ ಮಾರ್ಪಾಡು ಮಾಡದೇ ಪ್ರಯಾಣ ದರವನ್ನು ಸರಕಾರ ಪರಿಷ್ಕರಣೆ ಮಾಡಿದೆ.
ಶಕ್ತಿ ಯೋಜನೆಯ ಹೊರೆಯೂ ಸೇರಿದಂತೆ ಸಾರಿಗೆ ಇಲಾಖೆಗೆ ಸರ್ಕಾರ ಸುಮಾರು 6,000 ಕೋಟಿ ರೂ. ನೀಡಲು ಬಾಕಿ ಇದೆ. ಈ ನಡುವೆ ವೇತನ ಪರಿಷ್ಕರಣೆಗೆ ಸಾರಿಗೆ ಇಲಾಖೆಯ ನೌಕರರು ಬೇಡಿಕೆ ಇಡುತ್ತಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಬಸ್ ದರ ಏರಿಕೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ
ನಾಲ್ಕು ಸಾರಿಗೆ ನಿಗಮಗಳಿಗೆ ನಿತ್ಯ 9.56 ಕೋಟಿ ರೂ. ಹೆಚ್ಚುವರಿ ಹೊರೆಯಾಗುತ್ತಿದೆ. ಇದನ್ನು ಸರಿದೂಗಿಸಲು ಬಸ್ ದರ ಹೆಚ್ಚಳ ಮಾಡಲಾಗುತ್ತಿದೆ. ಶೇ. 15ರಷ್ಟು ಬಸ್ ಟಿಕೆಟ್ ದರ ಹೆಚ್ಚಳದಿಂದಾಗಿ ನಾಲ್ಕು ನಿಗಮಗಳ ಮಾಸಿಕ ಆದಾಯದಲ್ಲಿ 74.85 ಕೋಟಿ ರೂ.ನಷ್ಟು ಹೆಚ್ಚಳವಾಗಲಿದೆ. ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 5,015 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಪ್ರತಿ ತಿಂಗಳು ನಾಲ್ಕು ನಿಗಮಗಳಿಗೆ 417 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಆಗುವುದಿಲ್ಲ ಎಂದು ಎಚ್‌ಕೆ ಪಾಟೀಲ್ ವಿವರಿಸಿದರು.
ಸಿದ್ದರಾಮಯ್ಯ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಇನ್ನೆಷ್ಟು ಶುಲ್ಕ ತೆತ್ತಬೇಕು? ಆರ್.ಅಶೋಕ್ ಪ್ರಶ್ನೆ ;
ಬಸ್ ಟಿಕೆಟ್ ದರ ಏರಿಕೆಯನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದು, 'ಸಿಎಂ ಸಿದ್ದರಾಮಯ್ಯನವರೇ, ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರ. ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು?' ಎಂದು ಪ್ರಶ್ನಿಸಿದ್ದಾರೆ. 'ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ ಶೇ.15 ಏರಿಕೆ ಮಾಡಿದೆ ಎಂದಿದ್ದಾರೆ.
ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ, ಪೆಟ್ರೋಲ್ - ಡೀಸೆಲ್ ದರ ಏರಿಕೆ, ಆಸ್ತಿ ತೆರಿಗೆ, ಮುದ್ರಾಂಕ ದರ, ನೀರಿನ ದರ, ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ, ಹಾಲಿನ ದರ ಏರಿಕೆ, ಬಸ್ ದರ ಏರಿಕೆ ಅನಿವಾರ್ಯ. ಶೀಘ್ರದಲ್ಲೇ ಕನ್ನಡಿಗರು ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದು ವಿಪಕ್ಷ ನಾಯಕ ಆರ್.ಅಶೋಕ್ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
The Karnataka government has announced a 15 per cent hike in bus fares across all four state-run transport corporations: Karnataka State Road Transport Corporation (KSRTC), Kalyana Karnataka Road Transport Corporation (KKRTC), North Western Karnataka Road Transport Corporation (NWKRTC), and Bengaluru Metropolitan Transport Corporation (BMTC), effective January 5.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm