ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm