ಬ್ರೇಕಿಂಗ್ ನ್ಯೂಸ್
05-01-25 10:56 pm Bangalore Correspondent ಕರ್ನಾಟಕ
ಬೆಂಗಳೂರು, ಜ 05 : ವಿಧಾನ ಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿ ದೂರುಗಳು ದಾಖಲಾಗುತ್ತಲೇ ಇವೆ. ಇದೀಗ ಸಿಟಿ ರವಿ ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದ್ದು ಇದರ ಬಗ್ಗೆ 13 ಪುಟಗಳ ದೂರನ್ನು ಇ-ಮೇಲ್ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ್ದಾರೆ.
ಸಿಟಿ ತಮ್ಮ ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.
ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ ತನಿಖೆ ಕೈಗೊಂಡು ದಾಖಲೆಗಳನ್ನ ಸಂಗ್ರಹಿಸುತ್ತಿದ್ದು, ಸಿಟಿ ರವಿಗೂ ನೋಟಿಸ್ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೊಂದು ಕಡೆ ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನಾನು ಕೊಟ್ಟ ದೂರಿನ ಸಂಬಂಧ ಎಫ್ಐಆರ್ ಆಗಿಲ್ಲವೆಂದು ಕಿಡಿಕಾರಿದ್ದಾರೆ.
ತನಗೆ ಇನ್ನೂ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ
ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ.
‘ಈ ಸಂಚಿನಲ್ಲಿ ಪೊಲೀಸ್ ಮಹಾ ನಿರ್ದೇಶಕ, ಪೊಲೀಸ್ ಆಯುಕ್ತ, ಎಸ್‌ಪಿ ಮತ್ತು ಅಧೀನ ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನನಗಾಗಿರುವ ಅನ್ಯಾಯಕ್ಕೆ ₹1 ಕೋಟಿ ಪರಿಹಾರ ಕೊಡಬೇಕು. ಅದನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
CT Ravi writes letter to Human rights, demands for protection. Complains against DK Shivakumar and Lakshami Hebbalkar.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm