ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್‌ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್‌ನ ಬೇರೆ ಬ್ಲಾಕ್‌ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm