ಬ್ರೇಕಿಂಗ್ ನ್ಯೂಸ್
06-01-25 01:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಇಬ್ಬರು ಶಿಶುಗಳಲ್ಲಿ ಚೀನಾದಲ್ಲಿ ಪತ್ತೆಯಾದ ಎಚ್ಎಂಪಿವಿ (HMPV) ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಮೊದಲ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ಇದೇ ವೈರಸ್ ದೃಢಪಟ್ಟಿದೆ. ಆದರೆ, ಶಿಶು ಆರೋಗ್ಯದಲ್ಲಿದ್ದು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎಚ್ಎಂಪಿವಿ ವೈರಸ್ ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಆದರೆ, ಚೀನಾದ್ದೆಯಾ ಅಥವಾ ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ. 0.78 ರಷ್ಟು ಪ್ರಮಾಣದಲ್ಲಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ. ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಪತ್ತೆ ಮಾಡಲಾಗಿತ್ತು. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ಈ ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂದು ಕೆಲವು ತಜ್ಞರು ಹೇಳಿದ್ದಾರೆ.
The Indian Council of Medical Research (ICMR) has confirmed two cases of Human Metapneumovirus (HMPV) in Karnataka through routine surveillance for respiratory viral pathogens, the Union Health Ministry said on Monday.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm