ಬ್ರೇಕಿಂಗ್ ನ್ಯೂಸ್
08-01-25 03:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.8: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಒಟ್ಟು ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ವೈದ್ಯಾಧಿಕಾರಿ ಡಾ.ಎಸ್.ಎನ್ ಉಮೇಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿಯಾಗಿದೆ. ಗದಗ-ಬೆಟಗೇರಿ ನಗರಸಭೆ ಎಇಇ ಆರ್ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.
ಗದಗ ಬೆಟಗೇರಿ ನಗರಸಭೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ.
ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಹನಂಮತರಾಯ, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್.ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
The Lokayukta sleuths on Wednesday raid places connected to eight government officers, including a Joint Commissioner of Transport Department, who are accused of amassing assets disproportionate to their known sources of income.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm