ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm