ಬ್ರೇಕಿಂಗ್ ನ್ಯೂಸ್
10-01-25 02:44 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ದುಡಿಯಬೇಕೆಂದು ಹೇಳಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದೇ ಧಾಟಿಯಲ್ಲಿ ದೇಶದ ಮತ್ತೊಂದು ದೈತ್ಯ ಕಂಪನಿ ಲಾರ್ಸನ್ ಆಂಡ್ ಟರ್ಬೊ (L&T) ಅಧ್ಯಕ್ಷ ಸುಬ್ರಹ್ಮಣ್ಯನ್ ಮಾತನಾಡಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಎಲ್&ಟಿ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್, ವಾರಕ್ಕೊಮ್ಮೆ ಭಾನುವಾರ ಕೆಲಸಕ್ಕೆ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯಲ್ಲಿ ನೀಡಿರುವ ಹೇಳಿಕೆ ಕಾರ್ಪೊರೇಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾರ್ಪೊರೇಟ್ ವಲಯದ ಉದ್ಯೋಗಸ್ಥರು ಸುಬ್ರಹ್ಮಣ್ಯನ್ ಅವರ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಂತರಿಕ ಸಭೆಯಲ್ಲಿ ಶನಿವಾರವನ್ನು ಕಡ್ಡಾಯ ಕೆಲಸದ ದಿನವನ್ನಾಗಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸುಬ್ರಹ್ಮಣ್ಯನ್, ನಿಮ್ಮನ್ನು ಭಾನುವಾರಗಳಂದು ಕೆಲಸದಲ್ಲಿ ತೊಡಗಿಸದೇ ಇರುವುದಕ್ಕೆ ವಿಷಾದವಿದೆ. ಭಾನುವಾರವೂ ಕೆಲಸ ಮಾಡಿಸುವಂತಾದರೆ ಅದು ನನಗೆ ಹೆಚ್ಚಿನ ಖುಷಿ ಕೊಡುತ್ತದೆ. ಏಕೆಂದರೆ ನಾನೂ ಭಾನುವಾರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಭಾನುವಾರಗಳಂದು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ಎಷ್ಟು ಸಮಯದ ವರೆಗೆ ನಿಮ್ಮ ಹೆಂಡತಿಯನ್ನು ನೋಡುತ್ತಾ ಕುಳಿತಿರುತ್ತೀರಿ? ಹೆಂಡತಿಯರೂ ಅಷ್ಟೇ ಎಷ್ಟು ಅಂತ ಗಂಡನ ಮುಖ ನೋಡುತ್ತಾ ಕುಳಿತಿರಲು ಸಾಧ್ಯ? ಅದರ ಬದಲು ಕಚೇರಿಗೆ ಬಂದು ಕೆಲಸದಲ್ಲಿ ತೊಡಗಬಹುದು ಎಂದು ತನ್ನ ನೌಕರರಿಗೆ ಕರೆ ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಲು ಚೀನಾದ ಉದಾಹರಣೆ ನೀಡಿರುವ ಸುಬ್ರಹ್ಮಣ್ಯನ್, ಅಮೇರಿಕಾವನ್ನು ಹಿಂದಿಕ್ಕುವುದಕ್ಕೆ ಚೀನಾಗೆ ಸಾಧ್ಯವಾಗಿರುವುದು ಅಲ್ಲಿನ ಜನರ ತೀವ್ರವಾದ ಕೆಲಸದ ಸಂಸ್ಕೃತಿ. ಚೀನಾದವರು ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಾರೆ, ಅಮೇರಿಕನ್ನರು ವಾರಕ್ಕೆ 50 ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ನಮ್ಮ ಸಂಸ್ಥೆಯ ನೌಕರರೂ ಸಹ ಇದೇ ರೀತಿಯಲ್ಲಿ ವಾರಕ್ಕೆ 90 ಗಂಟೆ ಕೆಲಸ ಮಾಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲು ನಾವು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕಿದೆ ಎಂದು ಸುಬ್ರಹ್ಮಣ್ಯನ್ ಅಭಿಪ್ರಾಯಪಟ್ಟಿದ್ದಾರೆ.
In a now-viral video, Larsen & Toubro Chairman SN Subrahmanyan has ignited a storm of criticism for suggesting employees should work 90 hours a week, including Sundays.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm