ಬ್ರೇಕಿಂಗ್ ನ್ಯೂಸ್
10-01-25 11:01 pm Bangalore Correspondent ಕರ್ನಾಟಕ
ಮೈಸೂರು/ಬೆಂಗಳೂರು, ಜ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ. ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳು 10 ಸಾವಿರ ರೂ ನೀಡಲು ನಿರ್ಧರಿಸಿದ್ದೇವೆ. ಇದರಿಂದಾಗಿ ಆಶಾ ಕಾರ್ಯಕರ್ತರು ಮುಷ್ಕರ ವಾಪಸ್ ಪಡೆಯುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ (ಇನ್ಸೆಂಟಿವ್ಸ್) ಸೇರಿದಂತೆ ಪ್ರತಿ ತಿಂಗಳು 10,000 ರೂ. ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಮುಷ್ಕರ ಕೈಬಿಡಲು ಆಶಾ ಕಾರ್ಯಕರ್ತರು ಸಮ್ಮತಿಸಿದ್ದಾರೆ. ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇನ್ನು ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದು ಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು. ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನಾತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ಅವರು ಹೇಳಿದ್ದರು. ಅನ್ಯಾಯದ ವಿರುದ್ಧ ದನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕೈಗೆ ಕಾನೂನು ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ತಿಳಿಸಿದರು.
Protesting Accredited Social Health Activists (ASHAs) in Karnataka withdrew their strike on Friday, following a “successful” meeting of the Karnataka Rajya Samyukta ASHA Karyakartera Sangha with Chief Minister Siddaramaiah
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm