ಬ್ರೇಕಿಂಗ್ ನ್ಯೂಸ್
11-01-25 02:11 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.11: ಅಶ್ಲೀಲ ನಿಂದನೆ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. “ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ.
ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಇದಕ್ಕೆ ಸಂಬಂಧಿಸಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.
ಬೆದರಿಕೆ ಪತ್ರದಲ್ಲಿ ಏನಿದೆ?
15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ, ಹುಷಾರಾಗಿ ಇರಿ ಎಂದು ಬೆದರಿಕೆ ಒಡ್ಡಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19ರಂದು ಪರಿಷತ್‌ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು. ಸಚಿವೆ ವಿರುದ್ಧ ಪರಿಷತ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಮೇಲೆ ಹಲ್ಲೆ ನಡೆಸಲು ಯತ್ನಿಸಿತ್ತು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
CT Ravi receives threatening letter from anonymous person of killing him. Ravi was taken into custody after an FIR (First Information Report) was registered against him, for allegedly using derogatory remarks against Congress leader and Karnataka cabinet minister Laxmi Hebbalkar in the Legislative Council earlier in the day.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm