ಬ್ರೇಕಿಂಗ್ ನ್ಯೂಸ್
14-01-25 12:32 pm HK News Desk ಕರ್ನಾಟಕ
ಬೆಳಗಾವಿ, ಜ 14 : ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಹೆಬ್ಬಾಳ್ಕರ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಲಕ್ಷ್ಮೀ ಹೆಬ್ಬಾಳ್ಳರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಜಖಂ, ತೆರೆದುಕೊಂಡ ಏರ್‌ಬ್ಯಾಗ್:
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಿಂದ ಏರ್‌ಬ್ಯಾಗ್‌ಗಳು ತೆರೆದುಕೊಂಡಿರುವುದನ್ನು ಚಿತ್ರದಲ್ಲಿ ಕಾಣಬಹುದು.
ಲಕ್ಷ್ಮೀ ಹೆಬ್ಬಾಳ್ಳರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆತಂಕದ ಅವಶ್ಯಕತೆ ಇಲ್ಲ- ಪುತ್ರ ಮೃಣಾಲ್: ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, "ತಾಯಿಯ ಬೆನ್ನಿಗೆ ಎರಡ್ಮೂರು ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ರಾತ್ರಿ ಸಿಎಲ್ಪಿ ಮೀಟಿಂಗ್ ಮುಗಿಸಿ ಬೆಳಿಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಇಂದು ಬೆಳಗ್ಗೆ ಕ್ಷೇತ್ರದಲ್ಲಿ ಎರಡ್ಮೂರು ಮುಖ್ಯವಾದ ಕೆಲಸಗಳಿರುವ ಹಿನ್ನೆಲೆಯಲ್ಲಿ ರಸ್ತೆ ಮೂಲಕ ಆಗಮಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಷೇತ್ರದ ಜನರು, ಅಭಿಮಾನಿಗಳು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದ್ದಾರೆ.
ಹೆಬ್ಬಾಳ್ಕರ್ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯ- ವೈದ್ಯರು: ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಪ್ರತಿಕ್ರಿಯಿಸಿ, "ಬೆಳಗ್ಗೆ 6.15ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಇನ್ನು ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ" ಎಂದು ಮಾಹಿತಿ ನೀಡಿದರು.
The car carrying Minister Lakshmi Hebballar, who was travelling from Bengaluru to Belgaum, met with an accident at around 5 am today near Ambadagatti in Channamma's Kittur taluk. Four people, including Hebballar, were injured in the incident.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm