ಬ್ರೇಕಿಂಗ್ ನ್ಯೂಸ್
15-01-25 08:22 pm Bangalore Correspondent ಕರ್ನಾಟಕ
ಬೆಂಗಳೂರು, ಜ.16: ಮುಡಾ ನಿವೇಶನ ಹಂಚಿಕೆ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಬದಲು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 27ಕ್ಕೆ ಮುಂದೂಡಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಸಕ್ತ ಪ್ರಕರಣದ ತನಿಖಾ ವರದಿಯ ಪ್ರಗತಿಯನ್ನು ಜನವರಿ 27ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಅರ್ಜಿದಾರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.
ವಿಚಾರಣೆ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ (ಮುಡಾ) ಮೂಲ ಕಡತಗಳು ನಾಪತ್ತೆಯಾಗಿವೆ. ಹೀಗಾಗಿ ಪಾರದರ್ಶಕವಾಗಿ ತನಿಖೆ ನಡೆಯುತ್ತಿಲ್ಲ ಎಂದು ಅರ್ಜಿದಾರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದರು. ಇದಕ್ಕೆ ಲೋಕಾಯುಕ್ತ ಕಡೆಯಿಂದ ಈತನಕ ಆಗಿರುವ ತನಿಖೆಯ ಕುರಿತ ವರದಿಯನ್ನು ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದರು.
ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ 3.16 ಎಕರೆ ಜಮೀನಿಗೆ ಬದಲಾಗಿ 50:50 ಅನುಪಾತದಲ್ಲಿ ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ವಸತಿ ಬಡಾವಣೆಗಳನ್ನು ರೂಪಿಸಲು ಸ್ವಾಧೀನಪಡಿಸಿದ್ದ ಭೂಮಿಗೆ ಬದಲಾಗಿ ಮುಡಾದಿಂದ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇ. 50ರಷ್ಟು ನಿವೇಶನಗಳನ್ನು ಮಂಜೂರು ಮಾಡಿತ್ತು. ಈ ಬಗ್ಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ ದೂರಿನಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯಪಾಲರು ಪ್ರಾಸಿಕ್ಯುಶನ್ ಅನುಮತಿ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಕರ್ನಾಟಕ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿದ್ದಾರೆ. ಇದೇ ವೇಳೆ, ಮುಡಾ ಹಗರಣದಲ್ಲಿ ಭಾರೀ ಹಣ ಕೈ ಬದಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿತ್ತು.
The Karnataka High Court, on Wenesday allowed the Lokayukta to continue its investigation into the alleged Mysuru Urban Development Authority (MUDA) site allocation irregularities involving Chief Minister Siddaramaiah.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am