ಬ್ರೇಕಿಂಗ್ ನ್ಯೂಸ್
18-01-25 05:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಸೈಟ್ ಪ್ರಕರಣ ಮತ್ತಷ್ಟು ಕೊರಳು ಸುತ್ತಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ಸಂಬಂಧಿಸಿ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಮಾಹಿತಿ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಗಳ ಒಟ್ಟು ಮೌಲ್ಯ 300 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿನಿಂದ ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನಂತೆ ಇಡಿ ಎಂಟ್ರಿಯಾಗಿದ್ದು ಈಗ ಅಕ್ರಮವೆಂದು ಗುರುತಿಸಲ್ಪಟ್ಟ ಆಸ್ತಿಯನ್ನ ಜಪ್ತಿ ಮಾಡಿದೆ.
ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
The Enforcement Directorate (ED) has attached 142 immovable properties having a market value of ₹300 crore in connection with the Mysuru Urban Development Authority (MUDA) case against Karnataka Chief Minister Siddaramaiah, and others.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm