ಬ್ರೇಕಿಂಗ್ ನ್ಯೂಸ್
22-01-25 11:00 am HK News Desk ಕರ್ನಾಟಕ
ಯಲ್ಲಾಪುರ, ಜ 22: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.
ಕುಮಟಾದಲ್ಲಿ ಸಂತೆ ಇದ್ದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 9 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಸಂತಾಪ ;
ಮೀನುಗಾರಿ ಸಚಿವ ಮಂಕಾಳ್ ಎಸ್ ವೈದ್ಯ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. " ಹಾವೇರಿಯಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಸುಕಿನ ಜಾವ ಪಲ್ಟಿಯಾಗಿ 9 ಜನ ಮೃತ ಪಟ್ಟ ಘಟನೆಯ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಹೊಟ್ಟೆ ಪಾಡಿಗಾಗಿ ತಮ್ಮ ದಿನನಿತ್ಯ ಜೀವನ ಸಾಗಿಸಲು ಬೇರೆ ಊರುಗಳಿಂದ ವ್ಯಾಪಾರಕ್ಕೆ ಬಂದವರು ಕ್ರೂರ ವಿಧಿಯ ಆಟಕ್ಕೆ ಬಲಿಯಾಗಿದ್ದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 16 ಜನರು ಶೀಘ್ರವೇ ಗುಣ ಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ " ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ ;
ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, " ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು " ಎಂದು ಹೇಳಿದ್ದಾರೆ
Nine persons travelling in a lorry transporting vegetables were killed when the vehicle turned turtle near Arabail Ghat in Yellapur taluk of Karnataka's Uttara Kannada district on Wednesday early morning.
22-01-25 11:00 am
HK News Desk
Priyanka, Mohan Bhagwat; ಬೆಳಗಾವಿ ; ಮೋಹನ್ ಭಾಗವ...
21-01-25 10:59 pm
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
22-01-25 12:39 pm
Mangalore Correspondent
Kotekar Bank Robbery, Exclusive: ಮುಂಬೈನಲ್ಲೇ ಬ...
21-01-25 11:51 pm
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
22-01-25 01:18 pm
Mangalore Correspondent
Mangalore cyber fraud: ಹಣ ಡಬಲ್ ಮಾಡಿಕೊಡುವ ಆಮಿಷ...
22-01-25 11:04 am
Kotekar Bank Robbery, Police Shoot: ಬ್ಯಾಂಕ್ ದ...
21-01-25 06:00 pm
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm