Lokayukta, MUDA Case, CM Siddaramaiah; ಸಿಎಂ ಕುರ್ಚಿಯನ್ನೇ ಅಲುಗಾಡಿಸಿದ ಮುಡಾ ಕೇಸ್ ಗೆ ಟ್ವಿಸ್ಟ್ ; ಲೋಕಾಯುಕ್ತ ವರದಿಯಲ್ಲಿ ಸಿದ್ದರಾಮಯ್ಯ ಮತ್ತು ಪತ್ನಿಗೆ ಕ್ಲೀನ್ ಚಿಟ್ ? ಲೋಕಾ ವಿರುದ್ಧ ಸಿಡಿದೆದ್ದ ಸ್ನೇಹಮಯಿ‌ ! 

23-01-25 12:57 pm       HK News Desk   ಕರ್ನಾಟಕ

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಮೈಸೂರು, ಜ 23: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆಯಂತೆ..

ಲೋಕಾಯುಕ್ತ ತನಿಖಾ ವರದಿ ಸೋಮವಾರ ಕೋರ್ಟ್‌ಗೆ ಸಲ್ಲಿಕೆ;

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

MUDA Sites Return: Siddaramaiah's Wife Returns Plots - The Mysore.News

ಈ ಪ್ರಕರಣದಲ್ಲಿ‌ ಸಿಎಂ ಹಾಗೂ ಅವರ ಪತ್ನಿಯಾಗಲಿ ಭಾಗಿಯಾಗಿಲ್ಲ;

ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ. ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ‌ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

More irregularities emerge after Lokayukta's raid on legal metrology dept

ನನ್ನ ಹೋರಾಟಕ್ಕೆ ಯಾವುದೇ ಹಿನ್ನೆಡೆಯಾಗುವುದಿಲ್ಲ ;

ಲೋಕಾಯುಕ್ತ ತನಿಖಾ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ದೂರುದಾರ ಸ್ನೇಹಮಯಿ‌ಕೃಷ್ಣ, ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಕೊಡತ್ತೆ ಅಂತ ಗೊತ್ತಿದೆ. ಇದರಿಂದ ನನ್ನ ಹೋರಾಟಕ್ಕೆ ಯಾವುದೇ ಹಿನ್ನೆಡೆಯಾಗುವುದಿಲ್ಲ ಎಂದು ಹೇಳಿದ್ದಾರೆ.

Why a Revamping of the CBI Is Necessary

ಈ ರೀತಿ ವರದಿ ನೀಡುತ್ತಾರೆ ಅನ್ನೋ ಕಾರಣಕ್ಕೆ ನಾನು ಸಿಬಿಐ ತನಿಖೆಗೆ ಮನವಿ ಮಾಡಿದ್ದೇನೆ. ಸುಮ್ಮನೆ ಅಧಿಕಾರಿಗಳು ಏಕೆ ನಿಯಮಬಾಹಿರವಾಗಿ ಕೆಲಸ ಮಾಡುತ್ತಾರೆ? ಸಿಎಂ ಸಿದ್ದರಾಮಯ್ಯ ಖಂಡಿತಾ ಪ್ರಭಾವ ಬೀರಿದ್ದಾರೆ. ಲೋಕಾಯುಕ್ತರ ವಿರುದ್ಧವೂ ನಾನು ಹೋರಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

MUDA site 'scam' puts CM under the scanner just ahead of legislature  session - The Hindu

ಏನಿದು ಮುಡಾ ಹಗರಣ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.

Handle task strictly: DC Dr. Rajendra - Star of Mysore

ಈ ವಿಚಾರವಾಗಿ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದರು. 50- 50 ಅನುಪಾತವನ್ನು ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇವೆರಡೂ ಅಲ್ಲದಿದ್ದರೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆಗಾರಿಕೆಯಾಗಿರುತ್ತದೆ. ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎಂಬುದು ಈಗ ಕೇಳಿ ಬಂದಿರುವ ಆರೋಪವಾಗಿದೆ. ಹಲವಾರು ಪ್ರಕಣದಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲ. ಶೇಕಡಾ 50ರಷ್ಟು ನಿವೇಶನಗಳನ್ನೂ ನೀಡಿಲ್ಲ, ಬೇರೆಡೆ ಭೂಮಿಯನ್ನೂ ನಿಗದಿಪಡಿಸಿಲ್ಲ. ಅದಕ್ಕೆ ಬದಲಾಗಿ ಅರ್ಜಿಗಳಲ್ಲಿನ ಹಿರಿತನ ಪರಿಗಣಿಸದೆ ಅಕ್ರಮವಾಗಿ ಸೈಟ್ ಗಳನ್ನು ನೀಡಲಾಗಿದೆ ಎಂಬುದು ಕೇಳಿ ಬಂದಿರುವ ಆರೋಪವಾಗಿದೆ.

ಬದಲಿ ನಿವೇಶನ ಮಂಜೂರಾತಿ, ತುಂಡು ಜಾಗ ಹಂಚಿಕೆ, ಭೂ ಪರಿಹಾರವಾಗಿ ಜಾಗಗಳನ್ನ ನೀಡಿರುವ ಬಗ್ಗೆ ವಿವರಣೆ ನೀಡದೆ ಹಲವಾರು ಲೋಪ ಎಸಗಲಾಗಿದೆ ಎಂದು ಜಿಲ್ಲಾದಿಕಾರಿ ರಾಜೇಂದ್ರ ಅವರು 2023 ಫೆಬ್ರವರಿ 8 ರಂದು ಸರ್ಕಾರಕ್ಕೆ ಮೊದಲ ಪತ್ರ ಬರೆದಿದ್ದರು.

MUDA scam case: Karnataka HC issues notice to state govt

ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನು ಬದ್ಧವಾಗಿಯೇ ನಿವೇಶನ ಹಂಚಿಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದ ಅವರು, ``ನನ್ನ ಪತ್ನಿಗೆ ತವರು ಮನೆಯಿಂದ ಬಳುವಳಿಯಾಗಿ ಬಂದ ಕೆಸರೆ ಸಮೀಪದ 3 ಎಕರೆ 16 ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿತ್ತು. ಅದಕ್ಕೆ ಪರ್ಯಾಯ ಜಮೀನು ನೀಡಿದ್ದು ಕೂಡ ಬಿಜೆಪಿ ಸರ್ಕಾರದ ಕಾಲದಲ್ಲಿ, ನಾನು ಅಧಿಕಾರದಲ್ಲಿ ಇದ್ದಾಗ ಜಮೀನು ತೆಗೆದುಕೊಳ್ಳಲು ಹೋಗಲಿಲ್ಲ. ಹಿಂದಿನ ಬಿಜೆಪಿ ಸರ್ಕಾರವೇ 50:50 ನಿಯಮ ರೂಪಿಸಿ ಕಾನೂನು ಬದ್ಧವಾಗಿ ಪರ್ಯಾಯ ನಿವೇಶನ ನೀಡಿದೆ. ಇದರಲ್ಲಿ ತಪ್ಪೇನಿದೆ?’’ ಎಂದು ಪ್ರಶ್ನಿಸಿದ್ದರು.

Lokayukta Gives Clean Chit in MUDA Case to CM Siddaramaiah. Siddaramaiah and his wife Parvathi had been accused in the MUDA site allotment scam.