ಬ್ರೇಕಿಂಗ್ ನ್ಯೂಸ್
31-07-20 07:50 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆಗೆ ಇಂದು ದಿಢೀರ್ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ದಿಢೀರ್ ಭೇಟಿ ಅನೇಕ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುವ ಸಲುವಾಗಿಯೇ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳೇ ಕಳೆದಿದೆ. ಆದರೂ, ಈವರೆಗೆ ಪೂರ್ಣ ಸಂಪುಟ ರಚಿಸಲಾಗಿಲ್ಲ. ಸಂಪುಟದಲ್ಲಿ ಆರು ಸಚಿವ ಸ್ಥಾನಗಳು ಖಾಲಿಯಾಗಿಯೇ ಇವೆ. ಆದರೆ, ಈ ಆರು ಸ್ಥಾನಗಳಿಗೆ ಕನಿಷ್ಟ 20 ಜನ ಸಚಿವ ಸ್ಥಾನ ಆಕಾಂಕ್ಷಿಗಳಿದ್ದಾರೆ. ಅಲ್ಲದೆ, ಹಲವು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.
ಈ ನಡುವೆ ಕಳೆದ ಹಲವು ದಿನಗಳಿಂದ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಕುರಿತ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಿಗೆ ಸಿಎಂ ಯಡಿಯೂರಪ್ಪ ಆಗಸ್ಟ್ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಮನಸ್ಸು ಮಾಡಿದ್ದಾರೆ. ಹೈಕಮಾಂಡ್ ನಾಯಕರ ಇಶಾರೆಗೆ ಕಾಯುತ್ತಿದ್ದು, ಅವರು ಒಪ್ಪಿಗೆ ನೀಡಿದ ಬೆನ್ನಿಗೆ ಸಂಪುಟ ವಿಸ್ತರಣೆ ಖಚಿತ ಎನ್ನಲಾಗುತ್ತಿದೆ.
ಬಲ್ಲ ಮೂಲಗಳ ಪ್ರಕಾರ "ಆಗಸ್ಟ್ 2ನೇ ವಾರದಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಈ ಕುರಿತು ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸುವ ಮುನ್ನವೇ ರಾಜ್ಯಪಾಲ ವಜುಭಾಯಿ ವಾಲಾ ಅವರ ಜೊತೆ ಚರ್ಚಿಸಬೇಕು ಎಂಬ ಕಾರಣಕ್ಕಾಗಿಯೇ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ" ಎಂದು ಹೇಳಲಾಗುತ್ತಿದೆ.
ಈ ಭೇಟಿ ನಂತರ ಮಾತನಾಡಿದ ಗೃಹ ಸಚಿವ, "ಚರ್ಚೆ ವೇಳೆ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾತುಕತೆ ನಡೆಸಲಾಗಿಲ್ಲ. ರಾಜ್ಯ ಸರ್ಕಾರ ಮಾದಕ ವಸ್ತು ಜಾಲದ ಕುರಿತು ಸಮರ ಸಾರಿದ್ದು, ರಾಜ್ಯಪಾಲರು ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ" ಎಂದು ಹೇಳುವ ಮೂಲಕ ಸಂಪುಟ ವಿಸ್ತರಣೆಯ ಕುರಿತ ಚರ್ಚೆಯನ್ನು ತಳ್ಳಿಹಾಕಿದ್ದಾರೆ.
ಆದರೆ, ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಕುರಿತ ಸುದ್ದಿಗಳು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಪಾಲ ವಜುಭಾಯಿ ವಾಲಾ ಅವರ ಭೇಟಿಗೆ ವಿಶೇಷ ಅರ್ಧ ಕಲ್ಪಿಸಲಾಗಿದೆ. ಅಲ್ಲದೆ, ಒಂದು ವರ್ಷದಿಂದ ಸ್ಥಗಿತವಾಗಿದ್ದ ಸಂಪುಟ ವಿಸ್ತರಣೆ ಪ್ರಸರಣ ಕೊನೆಗೂ ಮುಕ್ತಾಯದ ಹಂತ ತಲುಪಿದೆ ಎನ್ನಲಾಗುತ್ತಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm