ಬ್ರೇಕಿಂಗ್ ನ್ಯೂಸ್
25-01-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧಿಸಿ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ. 75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಅಕ್ರಮ ಎಸಗಿರುವ ಆರೋಪ ಇದಾಗಿದೆ.
ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ, ನಿವೃತ್ತ ಶಿಕ್ಷಕ ಶಾಂತಪ್ಪ ಅವರಿಂದ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಕ್ರಮ ಕೈಗೊಂಡಿರುವ ಸರ್ಕಾರ, ಮೂರು ದಿನದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮುಡಾ 50:50 ಹಗರಣದಲ್ಲಿ ನಿಯಮಬಾಹಿರವಾಗಿ ಸೈಟ್ಹಂಚಿಕೆ ವಿಚಾರದಲ್ಲಿ ಮುಡಾದ ಮಾಜಿ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ. ಈ ಸಂಬಂಧ ಜ.10ರಂದೇ ಮುಡಾದ ಆಯುಕ್ತ ರಘುನಂದನ್ ಅವರಿಗೆ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.
ಭೂಮಿ ನೀಡಿದ ಅಂದಿನ ಆಯುಕ್ತರು, ಅಧಿಕಾರಿಗಳು, ನಗರ ಯೋಜನಾ ಕಾರ್ಯದರ್ಶಿ, ಅವರ ಜನ್ಮದಿನಾಂಕ, ವಿಳಾಸ, ನಿವೃತ್ತರಾಗಿದ್ದರೆ ಮನೆ ವಿಳಾಸ ನೀಡಿ ಪ್ರಾಧಿಕಾರದ ಹಿತಾಸಕ್ತಿಗೆ ವಿರುದ್ಧವಾಗಿ ದಿನೇಶ್ ಕುಮಾರ್ ನಡೆದುಕೊಂಡಿದ್ದಾರೆ. ದಿನೇಶ್ ಕುಮಾರ್ ಗಂಭೀರವಾದ ಕರ್ತವ್ಯಲೋಪ ಎಸಗಿದ್ದಾರೆ. ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಜವಾಬ್ದಾರಿಯುತ ಸರ್ಕಾರಿ ನೌಕರನ ರೀತಿ ನಡೆದುಕೊಂಡಿಲ್ಲ. ಕರ್ನಾಟಕ ನಾಗರಿಕ ಸೇವಾ ನಿಯಮಗಳು- 1957ರ ಅಧಿನಿಯಮದ ಅಡಿ ಶಿಸ್ತು ಕ್ರಮ ಜರುಗಿಸಲು ಅನುವಾಗುವಂತೆ ದೋಷಾರೋಪ ಸಲ್ಲಿಸಿ. ಮೂಲ ಅಥವಾ ದೃಢೀಕೃತ ಪ್ರತಿಗಳೊಂದಿಗೆ ಸರ್ಕಾರಕ್ಕೆ ಕಳುಹಿಸಿ ಎಂದು ಕೆ.ಲತಾ ಅವರಿಂದ ಮುಡಾ ಆಯುಕ್ತ ರಘುನಂದನ್ಗೆ ಪತ್ರ ಕಳುಹಿಸಲಾಗಿದೆ.
ಇದೇ ವೇಳೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಲೋಕಾಯುಕ್ತ ತನಿಖಾ ವರದಿ ಕೋರ್ಟಿಗೆ ಸಲ್ಲಿಕೆಯಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಅಕ್ರಮದ ತನಿಖೆ ನಡೆದಿದ್ದು, 3,000ಕ್ಕೂ ಹೆಚ್ಚು ಪುಟಗಳ ವರದಿ ಸಿದ್ಧಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ವರದಿಯಲ್ಲಿ ಕ್ಲೀನ್ಚಿಟ್ ನೀಡಲಾಗಿದೆ.
The government has directed action against former MUD Commissioner and officials for the alleged illegal allotment of a site to the Cathedral Society. There have been allegations of illegal allotment of 75225 square feet of land to the Cathedral Society, and there has been a demand for action against former MUD Commissioner Dinesh Kumar.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm