ಬ್ರೇಕಿಂಗ್ ನ್ಯೂಸ್
31-01-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಮಹತ್ವದ ಬೆಳವಣಿಗೆಯಲ್ಲಿ ಗಂಭೀರ ಸ್ಥಿತಿಯಲ್ಲಿ ನರಳುವ ರೋಗಿಗಳಿಗೆ ಘನತೆಯಿಂದ ಸಾಯುವುದಕ್ಕೆ ಅವಕಾಶ ನೀಡುವ ಹಕ್ಕನ್ನು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆ ಕಾಣದೆ ಸಂಕಷ್ಟ ಅನುಭವಿಸುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ.
ಬಹುದಿನಗಳ ಬೇಡಿಕೆಯಾಗಿರುವ ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಮಂಡಳಿ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಜಾರಿ ಮಾಡಲು ಮುಂದಾಗಿದೆ.
ದಯಾಮರಣಕ್ಕೆ ಅನುಮತಿ ಪ್ರಕ್ರಿಯೆ ಹೇಗೆ?
ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ವೈದ್ಯರ ಬೋರ್ಡ್ಗಳನ್ನು ಸ್ಥಾಪಿಸಲಾಗುತ್ತದೆ. ಪ್ರೈಮರಿ ಬೋರ್ಡ್ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.
ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲಿಗೆ ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆನಂತರ, ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯುತ್ತಾರೆ.
ಸುಪ್ರೀಂ ಕೋರ್ಟ್ ಸೂಚನೆ ಪಾಲನೆ
ತಾವು ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಸುಮಾರು 42 ವರ್ಷಗಳ ಕಾಲ ಜೀವಚ್ಛವದಂತೆ ಬದುಕಿದ ಅರುಣಾ ಶಾನುಭಾಗ್ ಅವರ ದಯಾಮರಣ ಅರ್ಜಿಯ ಕುರಿತ ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ದಯಾಮರಣ ನೀಡುವ ವಿಚಾರವಾಗಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
The Karnataka Health Department has passed a historic order to implement the Supreme Court’s directive regarding patients’ “Right to Die” with dignity. This move aims to benefit terminally ill patients with no hope of recovery or those in a persistent vegetative state, allowing for the withdrawal of life-sustaining treatment when no longer beneficial.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm