ಬ್ರೇಕಿಂಗ್ ನ್ಯೂಸ್
02-02-25 02:31 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಮಂಡಿ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಚಿಕ್ಕಬಳ್ಳಾಪುರ ಪ್ರವಾಸ ಕಾರ್ಯಕ್ರಮಗಳು ರದ್ದಾಗಿವೆ. ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸಗಳನ್ನು ರದ್ದು ಪಡಿಸಲಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಭಾನುವಾರ ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ. ಇದರಿಂದ ಅಲ್ಲಿ ಸೇರಿದ್ದ ಜನರು ಹತಾಶೆಗೊಂಡಿದ್ದಾರೆ.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗ್‌ಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Karnataka Chief Minister Siddaramaiah has cancelled all his official programmes on Sunday (February 2, 2025) after the doctors of Manipal Hospitals, Bengaluru, advised him to take rest following knee pain on his left leg.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm