ಬ್ರೇಕಿಂಗ್ ನ್ಯೂಸ್
03-02-25 03:18 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದನ್ನು ಬಿಜೆಪಿ ವ್ಯಂಗ್ಯವಾಡಿದೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ಟೀಕಿಸಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದರು. 'ಶಬ' ಎಂದು ಬರೆದ ಬಳಿಕ ಬೆಂಬಲಿಗರು ಶುಭ ಮಾಡಲು ಸೂಚಿಸಿದ್ದರಿಂದ ಆನಂತರ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಣ ಸಚಿವರ ರೀತಿಯಲ್ಲೇ ಕನ್ನಡ ಸಂಸ್ಕೃತಿ ಸಚಿವರಿಗೂ ಕನ್ನಡ ಓದಲು, ಬರೆಯಲು ಬರಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಶಿಕ್ಷಣ ಸಚಿವ, ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ವ್ಯಂಗ್ಯವಾಡಿದೆ.
ಕೆ.ಪಿ.ಎಸ್ಸಿ ಪ್ರಶ್ನೆ ಪತ್ರಿಕೆಗಳಲ್ಲು ಪದೇ ಪದೇ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸುವುದು. ಕನ್ನಡ ಶಾಲೆಗಳನ್ನು ಮುಚ್ಚಿಸುತ್ತಿರುವುದು ಈ ಎಲ್ಲವನ್ನೂ ನೋಡಿದರೆ ಕರುನಾಡಲ್ಲಿ ಕನ್ನಡವನ್ನು ಅಳಿಸಿ ಹಾಕಬೇಕೆಂದು ಕಾಂಗ್ರೆಸ್ ಹೊರಟಿದೆ ಎಂದೂ ಬಿಜೆಪಿ ಕಿಡಿಕಾರಿದೆ.
Shivraj Tangadagi, the Minister of #Kannada and #Culture, struggling with "Shubhavagali" – looks like even he needs a dictionary for cultural preservation! #karnataka https://t.co/OBbs4CdwSM
— HotTakeInsight (@HotTakeInsight) February 1, 2025
Kannada and Culture Minister Shivaraj Tangadagi was trolled severely by the opposition BJP after he struggled to write a Kannada word during his visit to an Anganvadi in Karatagi village in Koppal district.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm