ಬ್ರೇಕಿಂಗ್ ನ್ಯೂಸ್
03-02-25 08:20 pm HK News Desk ಕರ್ನಾಟಕ
ಮೈಸೂರು, ಫೆ.4 : ಸಿಎಂ ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಮೈಸೂರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ ಮಾಡಿದ್ದು ಲೋಕಾಯುಕ್ತಕ್ಕೆ ಮತ್ತೊಂದು ದೂರು ನೀಡಿದ್ದಾರೆ.
ಈಗಾಗಲೇ ಮುಡಾ ಸೈಟ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಕೆಸರೆ ಗ್ರಾಮದ 3.16 ಕುಂಟೆ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಮಲ್ಲಿಕಾರ್ಜುನ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಈಗ ಮತ್ತೆ ಮಲ್ಲಿಕಾರ್ಜುನ ಸ್ವಾಮಿ ಒಂದು ಎಕರೆ ಭೂಮಿ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನ ಸ್ವಾಮಿ ಅವರೇ ಖರೀದಿ ಮಾಡಿದ ಭೂಮಿಗಳನ್ನು ಇವರಿಗೆ ದಾನ ಮಾಡ್ತಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರು ಎಲ್ಲಿಯೂ ಹೇಳಿಲ್ಲ ಯಾಕೆ. ಮೊದಲು ಪಾರ್ವತಿಯವರ ಕುಟುಂಬದ ಆಸ್ತಿ ಎಷ್ಟು ಎಂಬುದು ಪತ್ತೆ ಮಾಡಬೇಕು. ಆನಂತರ, ಮಲ್ಲಿಕಾರ್ಜುನ ಸ್ವಾಮಿ ಎಷ್ಟು ಆಸ್ತಿ ಖರೀದಿ ಮಾಡಿದ್ದಾರೆ ಎಂಬುದನ್ನ ತನಿಖೆ ಮಾಡಬೇಕು ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಸ್ನೇಹಮಯಿ ಕೃಷ್ಣ ಆಗ್ರಹ ಮಾಡಿದ್ದಾರೆ.
1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4 ರಲ್ಲಿ ಒಂದು ಎಕರೆ ಭೂಮಿಯನ್ನು ಸಿದ್ದರಾಮಯ್ಯ ಖರೀದಿ ಮಾಡಿದ್ದಾರೆ. 1996 ರಲ್ಲಿ ಆ ಭೂಮಿಗೆ ಮುಡಾದಿಂದ ಅಂತಿಮ ಅದಿಸೂಚನೆ ಹೊರಡಿಸಲಾಗಿತ್ತು. ಭೂಮಿಗೆ ಡಿ ನೋಟಿಫೈಯನ್ನೂ ಮಾಡಿಸಲಾಗಿದೆ. ಸಿದ್ದರಾಮಯ್ಯ ಅವರೇ ಪ್ರಭಾವ ಬೀರಿ ಡಿ ನೋಟಿಫೈ ಮಾಡಿಸಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಅದೇ ಭೂಮಿಯನ್ನ 2010 ಅಕ್ಟೋಬರ್ ನಲ್ಲಿ ಪತ್ನಿ ಪಾರ್ವತಿಗೆ ದಾನ ಮಾಡಿರುವಂತೆ ತೋರಿಸಲಾಗಿದೆ. ಪಾರ್ವತಿ ಸಿದ್ದರಾಮಯ್ಯನವರು ಒಂದೇ ತಿಂಗಳಲ್ಲಿ ಅದನ್ನು ಮಗನ ಹೆಸರಿಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಬಂದ ಭೂಮಿಯನ್ನ ಯತೀಂದ್ರ ನಾಲ್ಕೇ ತಿಂಗಳಲ್ಲಿ ಬೇರೆಯವರಿಗೆ ಮಾರಾಟ ಮಾಡಿರೋದು ದಾಖಲೆಗಳಿಂದ ತಿಳಿದುಬರುತ್ತದೆ. ಈ ಎಲ್ಲಾ ವಿಚಾರಗಳನ್ನು ಇಲ್ಲಿವರೆಗೆ ಯಾಕೆ ಸಿದ್ದರಾಮಯ್ಯನವರು ತಿಳಿಸಿಲ್ಲ. ಹೀಗಾಗಿ ಸಿದ್ದರಾಮಯ್ಯನವರೇ ಮಲ್ಲಿಕಾರ್ಜುನ ಸ್ವಾಮಿ ಹೆಸರಿನಲ್ಲಿ ಬೇನಾಮಿ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಅನುಮಾನ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ. ಅಧಿಕಾರಿಗಳು ವಿಳಂಬ ನೀತಿ ತೋರಿಸಿದ್ರೆ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
Karnataka Chief Minister Siddaramaiah is facing fresh allegations of acquiring benami properties, with Right to Information Act (RTI) activist Snehamayi Krishna filing another complaint against him and his family with the Lokayukta
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm