ಬ್ರೇಕಿಂಗ್ ನ್ಯೂಸ್
03-02-25 10:38 pm HK News Desk ಕರ್ನಾಟಕ
ಮಂಡ್ಯ, ಫೆ 02: ಸಕ್ಕರೆನಾಡು ಮಂಡ್ಯದಲ್ಲಿ ನಾಲೆ ದುರಂತ ಸಂಭವಿಸಿದೆ. ತಾಲೂಕಿನ ಮಾಚಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಮತ್ತಿಬ್ಬರು ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸೋಮವಾರ ಮಧ್ಯಾಹ್ನ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರೊಂದು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿಬಿದ್ದಿದೆ. ಕಾರು ಉರುಳಿದ್ದನ್ನು ಕಂಡ ಸ್ಥಳೀಯರು ಅದರಲ್ಲಿದ್ದ ಓರ್ವನನ್ನು ರಕ್ಷಣೆ ಮಾಡಿದ್ದಾನೆ. ಸದ್ಯ ಓರ್ವನ ಮೃತದೇಹವನ್ನು ನಾಲೆಯಿಂದ ಹೊರತೆಗೆಯಲಾಗಿದೆ. ಕಾರಿನಲ್ಲಿ ಇನ್ನೂ ಇಬ್ಬರ ಶವಗಳು ಇರುವ ಶಂಕೆ ಮೂಡಿದ್ದು, ಅವರನ್ನು ಮೇಲೆಕ್ಕೆತ್ತುವ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಶಿವಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ. ವಿಸಿ ನಾಲೆಯಿಂದ ಕಾರನ್ನು ಹೊರ ತೆಗೆಯಲು ಮುಂದಾಗಿದ್ದಾರೆ.
ತಡೆಗೋಡೆ ಇಲ್ಲದ ಕಾರಣಕ್ಕೆ ಕಾರು ವಿಸಿ ನಾಲೆಯಲ್ಲಿ ಮುಳುಗಿದೆ. ಈ ಹಿಂದೆಯೂ ಹಲವು ಬಾರಿ ಇಂತಹ ಘಟನೆಗಳು ನಡೆದಿದ್ದು, ಘಟನೆ ನಡೆದ ಸಂದರ್ಭದಲ್ಲಿ ಜಿಲ್ಲಾಡಳಿತ ತಡೆಗೋಡೆ ನಿರ್ಮಿಸುವುದಾಗಿ ಭರವಸೆ ನೀಡುತ್ತದೆ. ಆದರೆ, ಕೆಲ ದಿನಗಳಲ್ಲಿ ಪ್ರಕರಣ ಜನರ ಮನಸ್ಸಿನಿಂದ ಮರೆಯಾಗುತ್ತಿದ್ದಂತೆ ಸುಮ್ಮನಾಗುತ್ತಾರೆ. ಹೀಗೆ ಮತ್ತೊಂದು ಅವಘಡ ಸಂಭವಿಸಿದಾಗಲೇ ಅವರು ಮತ್ತೆ ತಡೆಗೋಡೆ ಬಗ್ಗೆ ಮಾತನಾಡುವುದು. ಪ್ರತಿದಿನ ಈ ಮಾರ್ಗದಲ್ಲಿ ಹತ್ತಾರು ಶಾಲಾ ವಾಹನಗಳು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತವೆ. ಈ ದುರ್ಘಟನೆಯಿಂದ ನಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಹಿಂದೆ ಇಂತಹ ದುರ್ಘಟನೆಗಳು ಆದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಬಂದು ತಡಗೋಡೆ ನಿರ್ಮಿಸುವ ಆಶ್ವಾಸನೆ ನೀಡಿದ್ದರು. ಇನ್ನೂ ತಡೆಗೋಡೆ ನಿರ್ಮಿಸಿಲ್ಲ. ಮನುಷ್ಯರ ಪ್ರಾಣಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹಿಂದೆ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದು ಐದು ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಮಂಡ್ಯ ಜಿಲ್ಲೆಯಲ್ಲಿ ನೂರಾರು ಕಿ. ಮೀ ವಿಸಿ ನಾಲೆ ಇದೆ. ಎಲ್ಲೆಡೆ ತಡೆಗೋಡೆ ನಿರ್ಮಿಸದ ಕಾರಣದಿಂದಲೇ ಆಗಾಗ ಇಂತಹ ಅವಘಡಗಳು ಸಂಭವಿಸುತ್ತಿವೆ. ಇನ್ನಾದರೂ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಗಮನ ಹರಿಸಿ ತಡಗೋಡೆ ನಿರ್ಮಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಅಲ್ಲದೆ ಈ ಕೂಡಲೇ ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರು ಇಲ್ಲಿಗೆ ಬಂದು ತಡಗೋಡೆ ನಿರ್ಮಿಸಬೇಕು. ಅಲ್ಲಿಯವರೆಗೂ ಈ ರಸ್ತೆಯನ್ನೇ ಬಂದ್ ಮಾಡಿ ಸಾರ್ವಜನಿಕರ ಪ್ರಾಣವನ್ನು ಉಳಿಸಬೇಕೆಂದು ಒತ್ತಾಯಿಸಿದರು.
ಹಾಸನದಲ್ಲಿ ಇಬ್ಬರ ಸಾವು ;
ಇನ್ನು ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ರೋಹಿತ್ (28), ಗಣೇಶ್ (29) ಮೃತಪಟ್ಟ ದುರ್ದೈವಿಗಳು. ತಾಲೂಕಿನ ಶ್ರವಣಬೆಳಗೊಳದ ಜಿನ್ನಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತರಿಬ್ಬರೂ ಮೂಲತಃ ರಾಜಸ್ಥಾನದವರಾಗಿದ್ದು, ಶ್ರವಣಬೆಳಗೊಳದಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ಫೆ.2ರಂದು ಬಿಸಿಲಿನ ತಾಪದ ಹಿನ್ನೆಲೆ ಮಧ್ಯಾಹ್ನದವರೆಗೂ ಕೆಲಸ ಮಾಡಿ ಬಿಸಿಲು ಹೆಚ್ಚಾದಾಗ ಈಜಲು ಜಿನ್ನಾಪುರ ಕೆರೆಗೆ ಹೋಗಿದ್ದರು.
ಮೊದಲು ಕೆರೆಗೆ ಇಳಿದ ರೋಹಿತ್, ಈಜುವ ವೇಳೆ ಕೆರೆಯ ಗಿಡಗಂಟಿಗಳ ನಡುವೆ ಸಿಲುಕಿದ್ದಾರೆ. ಮೇಲೆ ಬರಲಾಗದೇ ಕಾಪಾಡಿ ಕಾಪಾಡಿ ಎಂದು ಕೂಗಾಡಿದ್ದಾರೆ. ತಕ್ಷಣ ಕೆರೆಗೆ ಜಿಗಿದ ಗಣೇಶ್ ಕೂಡ ಅಲ್ಲಿನ ಕೆಸರು ಹಾಗೂ ಬಳ್ಳಿಗಳ ನಡುವೆ ಸಿಲುಕಿದ್ದಾರೆ. ಮೇಲೆ ಬರಲಾಗದೇ ಇಬ್ಬರೂ ಒಟ್ಟಿಗೆ ಮೃತಪಟ್ಟಿದ್ದಾರೆ. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕುತ್ತಾ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಕೂಡಲೇ ಸ್ಥಳೀಯರು ಸಮೀಪದ ಶ್ರವಣಬೆಳಗೊಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹ ಹೊರತೆಗೆದು ಶವಾಗಾರಕ್ಕೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man died and two others were feared drowned after a car they were travelling in veered off the road and plunged into the Visvesvaraya Canal near Tibbanahalli in Mandya taluk.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm