ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm