ಬ್ರೇಕಿಂಗ್ ನ್ಯೂಸ್
04-02-25 11:32 pm HK News Desk ಕರ್ನಾಟಕ
ಹಾವೇರಿ, ಫೆ 04: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿರುವ ಡಿಹೆಚ್‌ಒ ರಾಜೇಶ್ ಸುರಗಿಹಳ್ಳಿ. ಹಾವೇರಿ ತಾಲ್ಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ಕೂಡ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್‌ಒ ಹಿಂದೇಟು ಹಾಕಿದ್ದಾರೆ.
In a shocking incident, a nurse at the Adoor Primary Health Center in Hanagal taluk, Haveri district, used Feviquick adhesive instead of stitching a deep wound on a 7-year-old boy’s cheek. The incident occurred on January 14 but only came to light later.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm