ಬ್ರೇಕಿಂಗ್ ನ್ಯೂಸ್
05-02-25 06:39 pm HK News Desk ಕರ್ನಾಟಕ
ಯಾದಗಿರಿ, ಫೆ 05: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಗಂಭೀರ ಗಾಯಗೊಂಡಿದ್ದರು. ಆದ್ರೆ, ಆ ಇಬ್ಬರು ಕೂಡ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಘಟನೆ ಸಂಭವಿಸ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಿಂಗಸುಗೂರು ತಾಲ್ಲೂಕಿನ ಗುಡಂಗುಂಟಿ ಗ್ರಾಮದವರಾಗಿದ್ದಾರೆ. ಶಹಾಪೂರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಮಕ್ಕಳೊಂದಿಗೆ ದಂಪತಿ ಬಂದಿದ್ದರು. ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳಾಗಿದ್ದಾರೆ.

ತವರು ಮನೆಗೆ ಹೋಗಿ ಬರುವ ವೇಳೆ ಘಟನೆ;
ಮಕ್ಕಳೊಂದಿಗೆ ಆಂಜನೇಯ ದಂಪತಿ ತವರೂರು ಆಗಿರುವ ಹಳಿಸಗರ ಗ್ರಾಮಕ್ಕೆ ಬಂದಿದ್ದರು. ಮರಳಿ ಗ್ರಾಮಕ್ಕೆ ಹೋಗುವಾಗ ಸಾರಿಗೆ ಬಸ್ ಎದುರು ಬಂದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಅಫಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ದಂಪತಿ, ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
Yadagiri bus bike accident, five of family including three children killed on spot. The family was returning back from their inlaws house after which the bus rammed over the bike.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm