ಬ್ರೇಕಿಂಗ್ ನ್ಯೂಸ್
09-02-25 07:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ಖಾಸಗಿ ಬಸ್ಸೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಅಶೋಕ್ ಅಂಡ್ ಲಾಜಿಸ್ಟಿಕ್ ಟ್ರಾವೆಲ್ಸ್‌ಗೆ ಸೇರಿದ KA01 AL 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ.
ಟೈರ್ ಬ್ಲಾಸ್ಟ್ ಆಗ್ತಿದ್ದಂತೆ ಬಸ್ಸಿನ ವೇಗದಿಂದಾಗಿ ರಸ್ತೆ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್‌ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಟ್ರಾವೆಲ್ಸ್ ಸಂಸ್ಥೆ ಕೇರಳದತ್ತ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A private bus caught fire reportedly after a tire burst while traveling on the Bengaluru-Mysuru Expressway on Sunday. Fortunately, all passengers escaped unhurt. The incident occurred near Sanjo Hospital in Mandya.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm