ಬ್ರೇಕಿಂಗ್ ನ್ಯೂಸ್
10-02-25 07:01 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.10: ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸತ್ತನೆಂದು ಊರಿಗೆ ಕರೆತರುತ್ತಿದ್ದಾಗಲೇ ಬದುಕಿ ಪವಾಡಕ್ಕೆ ಕಾರಣವಾದ ಘಟನೆ ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆದಿದೆ.
ಬಂಕಾಪುರದ ಮಂಜುನಾಥ ನಗರದ ನಿವಾಸಿ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ (45) ಸತ್ತು ಬದುಕಿದ ವ್ಯಕ್ತಿ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ದಿನ ಉಸಿರು ಇಲ್ಲವೆಂದು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದರಿಂದ ಪತ್ನಿ ಮತ್ತು ಸಂಬಂಧಿಕರು ಗೋಳಾಡುತ್ತ ಆಂಬ್ಯುಲೆನ್ಸ್‌ನಲ್ಲಿ ತಮ್ಮ ಊರು ಬಂಕಾಪುರಕ್ಕೆ ಕರೆದೊಯ್ಯುತ್ತಿದ್ದರು.
ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ ಶೀಲಾ, ಅಗೋ ನೊಡು, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?' ಎಂದು ಜೋರಾಗಿ ಕರೆದು ಗೋಳಾಡಿದ್ದಳು. ಗೋಳಾಡಿ ಕಣ್ಣೀರಿಟ್ಟಾಗಲೇ ಮೃತ ವ್ಯಕ್ತಿ ಉಸಿರಾಡಿದ್ದಾನೆ. ಗಾಬರಿಗೊಂಡ ಸಂಬಂಧಿಕರು ರೋಗಿಯನ್ನು ನೇರವಾಗಿ ಶಿಗ್ಗಾವಿ ಆಸ್ಪತ್ರೆಗೆ
ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢಪಟ್ಟಿದೆ. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿದ್ದಾರೆ.
ಅದೇ ಆಂಬುಲೆನ್ಸ್ ವಾಹನದಲ್ಲಿ ರೋಗಿಯನ್ನು ಮರಳಿ ಕರೆತಂದು ಹುಬ್ಬಳ್ಳಿ ಕಿಮ್ಸ್‌ನಲ್ಲಿ ದಾಖಲಿಸಲಾಗಿದೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅಶೋಕ ಗುಡಿಮನಿ ಮಾಸ್ತರ್ ಸತ್ತಿದ್ದಾರೆಂದು ತಿಳಿದ ಬಂಕಾಪುರದ ಜನರು ಅಷ್ಟರಲ್ಲೇ ಬ್ಯಾನರ್ ಗಳನ್ನು ಹಾಕಿದ್ದರು. ಅಲ್ಲದೆ, ಮೃತನ ಅಂತ್ಯಕ್ರಿಯೆಗೂ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು.
ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿಯೂ ಸತ್ತ ಸುದ್ದಿ ಪ್ರಚಾರವಾಗಿತ್ತು. ಬಂಕಾಪುರ ಪಟ್ಟಣದಲ್ಲಿ ನೇತಾಡಿದ್ದ ಬ್ಯಾನರ್‌ಗಳು ಅಶೋಕ ಸಾವಿನ ಸುದ್ದಿಯನ್ನು ಅಣಕಿಸಿವೆ.
Hubballi dead man gets back to like in ambulance after his family shanted to look his favourite dabba.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm